ಕೂಡಿಗೆ: ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಇಡೀ ದೇಶವನ್ನು ಒಂದಾಗಿಸುವ ಮೂಲಕ ಸಾಮಾನ್ಯ ನಾಗರಿಕನು ಕೂಡ ಗೌರವ ಯುತವಾಗಿ ಹಾಗೂ ಆತ್ಮವಿಶ್ವಾಸದಿಂದ ಬದುಕನ್ನು ಕಂಡು ಕೊಳ್ಳುವಂತೆ ಮಾಡಿದ ಮಾನವತಾವಾದಿ ಹಾಗೂ ಸಮಾಜದ ಸುಧಾರಣೆ ತಂದAತಹ ಶ್ರೇಷ್ಠ ಜ್ಞಾನಿ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಅವರು ಅಭಿಪ್ರಾಯಿಸಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಕ್ಯಾಂಪಸ್‌ನ ಕಾವೇರಿ ಸಭಾಂಗಣದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೭ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಮಾನತೆಯ ಬದುಕಿಗಾಗಿ ಹಗಲಿರುಳು ಹೋರಾಟ ನಡೆಸಿದ ಮಹಾನ್ ಚೇತನ. ಸಮಾಜದಲ್ಲಿ ಅಸಮಾನತೆ ತೊಲಗಿಸಿ, ಎಲ್ಲಾ ವರ್ಗದವರಿಗೂ ಸಮಾನ ಹಕ್ಕುಗಳನ್ನು ಒದಗಿಸಿಕೊಡಲು ಶ್ರಮಿಸಿದ ಶೋಷಿತ ವರ್ಗದ ಹರಿಕಾರ ಎಂದರು.
ಸೂಕ್ಷಾö್ಮಣುಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗುಣಶ್ರೀ ಅವರು ಮಾತನಾಡಿ, ಶಿಕ್ಷಣ ಪಡೆದುಕೊಂಡು ಸಂಘಟನೆಯಲ್ಲಿ ತೊಡಗಿಕೊಂಡು ಹೋರಾಟದ ಮೂಲಕ ಉತ್ತಮ ಸಮಾಜದ ನಿರ್ಮಾಣ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟವರು ಡಾ. ಬಿ.ಆರ್. ಅಂಬೇಡ್ಕರ್. ಹಾಗಾಗಿ ಇಂದಿಗೂ ಕೂಡ ಡಾ. ಬಿ.ಆರ್. ಅಂಬೇಡ್ಕರ್ ಬಹು ಮುಖ್ಯರಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಕೊಡಗು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ವರ್ಗ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಕಾರ್ಯಕ್ರಮ ನಿರೂಪಿಸಿದರು.
ವೀರಾಜಪೇಟೆ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ