ಮಡಿಕೇರಿ: ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ವೀರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸಾಧನೆ ಮತ್ತು ಬದುಕಿನ ಹಾದಿಯನ್ನು ಸ್ಮರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ದಲಿತ ಮುಖಂಡ ಕೆ. ಪಳನಿ ಪ್ರಕಾಶ್, ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ನಾವು ಉತ್ತಮ ಜೀವನ ನಡೆಸುತ್ತಿದ್ದೇವೆ. ಅವರ ಚೈತ್ಯನದ ಶಕ್ತಿಯನ್ನು ಇಂದಿನ ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯ ಚಿಂತನೆಯನ್ನು ವಾಸ್ತವಗೊಳಿಸಬೇಕು ಎಂದು ಕರೆ ನೀಡಿದರು.
ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೀರಾಜಪೇಟೆ ತಾಲೂಕು ಸಂಚಾಲಕ ಮನು ಚೆನ್ನಯ್ಯನಕೋಟೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸಂಚಾಲಕಿ ರೇಖಾ ಮಹೇಶ್, ಮಹಿಳಾ ಒಕ್ಕೂಟದ ಸುನಿತಾ ಸುಧಾಕರ್, ಜಿಲ್ಲಾ ಸಂಘಟನಾ ಸಂಚಾಲರಾದ ಭಾವ ಮಾಲ್ದಾರೆ, ಬೋಜ ಬಾರಿಕಾಡು, ಕೆದಮಳ್ಳೂರು ಗ್ರಾಮ ಸಂಚಾಲಕ ರಘು ಉಪಸ್ಥಿತರಿದ್ದರು. ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕÀ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿ