ಮಡಿಕೇರಿ, ಡಿ. ೧೦: ತೂಕ್‌ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿಯಿಂದ ತಾ.೧೨ರಂದು (ನಾಳೆ) ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತಾಟ್ ನಮ್ಮೆಯನ್ನು ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.

ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ತಾ.೧೨ರಂದು ಅಮ್ಮತ್ತಿ ಕೊಡವ ಸಮಾಜದ ಆವರಣದಲ್ಲಿ ಎರಡನೇ ವರ್ಷದ ಕೊಡವ ವಾಲಗತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು, ಪುರುಷರು ಹಾಗೂ ಮಹಿಳೆಯರು ಎಂದು ಬೇರೆ ಬೇರೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ತಲಾ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಲ್ಲಿದ್ದು, ಪ್ರಾಥಮಿಕ ವಿಭಾಗ ಒಂದರಿAದ ೭ನೇ ತರಗತಿಯವರೆಗೆ, ೮ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಹೈಸ್ಕೂಲ್ ವಿಭಾಗ, ಒಂದನೇ ಪಿಯುಸಿಯಿಂದ ೩ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ ೬೦ ವಯಸ್ಸಿನವರೆಗೆ ಮತ್ತೊಂದು ವಿಭಾಗ, ೬೦ ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ ಹೀಗೆ ಐದು ವಿಭಾಗಗಳಲ್ಲಿ ಪುರುಷರು ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮೊದಲ ಬಾರಿಗೆ ವೀರಾಜಪೇಟೆ ಕೊಡವ ಸಮಾಜದಲ್ಲಿ ಯಶಸ್ವಿ ಕೊಡವ ವಾಲಗತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು, ಜನಮನ್ನಣೆ ಪಡೆದಿತ್ತು, ಈ ಬಾರಿ ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಅಜ್ಜಿಕುಟ್ಟೀರ ಎಸ್ ಪೊನ್ನಣ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಅಖಿಲ ಕೊಡವ ಸಮಾಜ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಪ್ಪ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷರಾದ ಐನಂಡ ಪ್ರಕಾಶ್ ಗಣಪತಿ, ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ಅಧ್ಯಕ್ಷ ಸುಳ್ಳಿಮಾಡ ಗೋಪಾಲ್ ತಿಮ್ಮಯ್ಯ, ವೀರಾಜಪೇಟೆ ಹಿರಿಯ ನಾಗರಿಕರ ವೇದಿಕೆಯ ಕಾರ್ಯದರ್ಶಿ ಪಾರುವಂಗಡ ಸನ್ನಿ ಮೊಣ್ಣಪ್ಪ, ಜೇಸಿಐ ರಾಷ್ಟಿçÃಯ ಉಪಾಧ್ಯಕ್ಷ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ|| ಯತಿರಾಜ್, ವೀರಾಜಪೇಟೆಯ ವೈದ್ಯರಾದ ಡಾ|| ಚೇಂದಿರ ಬೋಪಣ್ಣ, ಕೊಡವ ಸಿನಿಮಾ ನಟ ಹಾಗೂ ನಿರ್ದೇಶಕ ಕಾಳಿಮಾಡ ದಿನೇಶ್ ನಾಚಪ್ಪ, ಹಿರಿಯ ಕಲಾವಿದರಾದ ಮಂಡೀರ ಬೋಪಯ್ಯ ಹಾಗೂ ಪದ್ಮ ಬೋಪಯ್ಯ ಭಾಗವಹಿಸಲಿದ್ದು, ತೂಕ್‌ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂದರ್ಭ ಕಳೆದ ಎರಡು ವರ್ಷಗಳ ಹಿಂದೆ ಅಗಲಿದ ಖ್ಯಾತ ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಕಣ್ಣುದಾನ ಮತ್ತು ದೇಹದಾನದ ನೋಂದಣಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಣಿಗಾಗಿ ೯೪೮೦೫೫೬೬೬೭ ಅಥವಾ ೯೪೮೩೮೧೫೪೭೮ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ.