ಶನಿವಾರಸಂತೆ, ಡಿ. ೯: ಕನ್ನಡ ಭಾಷೆ ಸಾಹಿತ್ಯ, ಸಂಸ್ಕೃತಿಯಿAದ ಶ್ರೀಮಂತ ಭಾಷೆಯಾಗಿದ್ದು, ಆಡುಮಾತಿನಲ್ಲಿ ವೈವಿಧ್ಯತೆ ಇದ್ದರೂ ಕನ್ನಡಕ್ಕೆ ಕನ್ನಡವೇ ಸಾಟಿ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅಭಿಪ್ರಾಯ ವ್ಯಕ್ತಪಡಿಸಿದರು.
ಶನಿವಾರಸಂತೆಯ ಕನ್ನಡ ಭವನದಲ್ಲಿ ನಡೆದ ಸುವರ್ಣ ಕರ್ನಾಟಕ ೫೦ ರ ಸಂಭ್ರಮ, ಕಟ್ಟೆಮನೆ ಪುಟ್ಟಸ್ವಾಮಿಯವರ ದತ್ತಿನಿಧಿ ಹಾಗೂ ಕನ್ನಡ ಭವನ ಉದ್ಘಾಟನಾ ಸಮಾರಂಭದಲ್ಲಿ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಕಚೇರಿ ಉಪ ತಹಶೀಲ್ದಾರ್ ನಾಗರಾಜ್ ಮಾತನಾಡಿ, ಕನ್ನಡ ಭಾಷೆಗೆ ೨ ಸಾವಿರ ವರ್ಷಗಳ ಇತಿಹಾಸವಿದೆ.೮ ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಕನ್ನಡ ಭಾಷೆಯ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನವಿರಬೇಕು ಎಂದರು.
ಪ್ರಾಸ್ತಾವಿಕ ನುಡಿಯಾಡಿದ ಕೊಡ್ಲಿಪೇಟೆ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರAಜನ್, ದಾನಿ ಕಟ್ಟೆಮನೆ ಪುಟ್ಟಸ್ವಾಮಿ ಅವರ ಜೀವನ ಚರಿತ್ರೆಯನ್ನು ತಿಳಿಸಿದರು.ಉಪನ್ಯಾಸಕಿ ನವ್ಯಾ ಕನ್ನಡ ಸಾಹಿತ್ಯ ಪರಿಷತ್ ನಡೆದು ಬಂದ ದಾರಿಯ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಅಧ್ಯಕ್ಷ ಬಿ.ಬಿ.ನಾಗರಾಜ್ ಮಾತನಾಡಿ, ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರದಿಂದ ಕಸಾಪ ಕಚೇರಿಗೆ ಕನ್ನಡ ಭವನ ಉದ್ಘಾಟನೆಯಾಗಿದೆ.ಸಹಕಾರ ನೀಡಿದ ಕನ್ನಡ ಮನಸ್ಸುಗಳ ಔದರ್ಯದಿಂದ ಕನ್ನಡ ಸಾಹಿತ್ಯ ಚಟುವಟಿಕೆಗಳು ನಿತ್ಯವೂ ನಡೆಯಲಿ ಎಂದು ಹಾರೈಸಿದರು.
ಕಸಾಪ ತಾಲೂಕು ಕಾರ್ಯದರ್ಶಿ ವೀರರಾಜು, ಸದಸ್ಯರಾದ ಗಂಗಾಧರ್, ಚಂದ್ರಕಲಾ, ಹೋಬಳಿ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಪುಟ್ಟಸ್ವಾಮಿ, ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಸರ್ದಾರ್ ಅಹಮ್ಮದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಚ್.ಬಿ.ಜಯಮ್ಮ, ದತ್ತಿ ದಾನಿ ಪುಟ್ಟಸ್ವಾಮಿಯವರ ಪುತ್ರಿ ಲಲಿತಾ, ಕಸಾಪ ಸದಸ್ಯರು ಹಾಜರಿದ್ದರು.