ಕೂಡಿಗೆ, ಡಿ. ೧೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ಸರ್ವೆ ನಂಬರ್ ೨೨ರಲ್ಲಿರುವ ಕೆರೆಯನ್ನು ಕಂದಾಯ ಇಲಾಖೆ ಸೂಚನೆ ಮೇರೆಗೆ, ಸರ್ವೆ ಇಲಾಖೆಯ ಮೂಲಕ ಗುರುತಿಸಿ ಒತ್ತುವರಿಯಾಗಿದ್ದ ಕೆರೆಯ ಜಾಗವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭಾಸ್ಕರ್ ನಾಯಕ್ ಅವರಿಗೆ ದಾಖಲೆ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್, ಪಾರ್ವತಮ್ಮ ರಾಮೇಗೌಡ, ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸರ್ವೆ ಇಲಾಖೆಯ ಅಧಿಕಾರಿ ವೆಂಕಟೇಶ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.