ಕೇಂದ್ರ ಕಾಂಗ್ರೆಸ್ ನಾಯಕರನ್ನೇ ಏಕೆ ಗುರಿಯಾಗಿಸಿಕೊಂಡಿದೆ ; ಸಿದ್ದರಾಮಯ್ಯ
ಬೆಂಗಳೂರು, ಡಿ. ೧೦: ಜಾರ್ಖಂಡ್ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸಂಬAಧಿಸಿದ ಸ್ಥಳಗಳಲ್ಲಿ ರೂ. ೨೦೦ ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದಷ್ಟು ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಕೇಂದ್ರವು ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ ಹೊರತು ಬಿಜೆಪಿಯನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಾರ್ಖಂಡ್ ಮತ್ತು ಒಡಿಶಾದಲ್ಲಿ ರಾಜ್ಯಸಭಾ ಸಂಸದ ಧೀರಜ್ ಸಾಹುಗೆ ಸಂಬAಧಿಸಿರುವ ಸ್ಥಳಗಳ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರು (ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕರ ಮೇಲೂ ದಾಳಿ ಮಾಡಲಿ. ಆಗ ಮಾತ್ರ ಅವರ ಬಳಿ ಎಷ್ಟು ಅಕ್ರಮ ಸಂಪತ್ತು ಇದೆ ಎಂದು ತಿಳಿಯುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಆದಾಯ ತೆರಿಗೆ ಕಾಯ್ದೆ ಪ್ರಕಾರ, ಕಪ್ಪುಹಣವನ್ನು ಯಾರು ಕೂಡಿಟ್ಟರೂ ಅದು ತಪ್ಪು. ಐಟಿ ಇಲಾಖೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಆದರೆ, ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಕೇವಲ ಕಾಂಗ್ರೆಸ್ಅನ್ನು ಗುರಿಯಾಗಿಸಿಕೊಂಡಿದೆ ಎಂದರು.
ಜಮ್ಮು-ಕಾಶ್ಮೀರದ ೩೭೦ನೇ ವಿಧಿ ರದ್ದು : ಇಂದು ತೀರ್ಪು
ನವದೆಹಲಿ, ಡಿ. ೧೦: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೦ನೇ ವಿಧಿಯನ್ನು ರದ್ದುಗೊಳಿಸುವ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತಾ. ೧೧ ರಂದು (ಇಂದು) ತೀರ್ಪು ನೀಡಲಿದೆ. ಎರಡು ವಾರಗಳ ಕಾಲ ನಡೆದ ವಿಚಾರಣೆಯ ಬಳಿಕ ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಆರ್ಟಿಕಲ್ ೩೭೦ ರದ್ದತಿ ವಿರುದ್ಧ ವಾದ ಮಂಡಿಸಿದ ಅರ್ಜಿಗಳಲ್ಲಿ ಮುಖ್ಯವಾಗಿ ಎರಡು ಸವಾಲುಗಳನ್ನು ಎತ್ತಲಾಗಿತ್ತು. ಮೊದಲನೆಯದು ರಾಷ್ಟçಪತಿಗಳ ಆದೇಶಗಳ ಸಾಂವಿಧಾನಿಕತೆಗೆ ಸಂಬAಧಿಸಿದೆ. ಆದರೆ ಎರಡನೆಯ ಸವಾಲು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಬಗ್ಗೆ. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ರಚನಾ ಸಭೆಯ ಒಪ್ಪಿಗೆಯಿಲ್ಲದೆ ರಾಷ್ಟçಪತಿಗಳು ಸಾಂವಿಧಾನಿಕ ನಿಬಂಧನೆ ೩೭೦ ಅನ್ನು ಪರೋಕ್ಷವಾಗಿ ತಿದ್ದುಪಡಿ ಮಾಡಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.
ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯಿ
ರಾಯ್ಪುರ, ಡಿ. ೧೦: ಛತ್ತೀಸ್ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕರ ಸಭೆಯಲ್ಲಿ ಸಿಎಂ ಹುದ್ದೆಗೆ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು ಅನುಮೋದಿಸಿದ್ದಾರೆ.
ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ
ಲಖನೌ, ಡಿ. ೧೦: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಎಸ್ಪಿಯ ಷಹಜಹಾನ್ಪುರ ಜಿಲ್ಲಾ ಘಟಕದ ಮುಖ್ಯಸ್ಥ ಉದಯವೀರ್ ಸಿಂಗ್, ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಮಾಯಾವತಿ ಘೋಷಿಸಿದ್ದು, ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಡೆ ಪಕ್ಷ ಸಂಘಟನೆ ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಆದರೆ ಪಕ್ಷದ ಅಧಿಕೃತ ಹೇಳಿಕೆಯು ಅಂತಹ ಯಾವುದೇ ನಿರ್ಧಾರವನ್ನು ಉಲ್ಲೇಖಿಸಿಲ್ಲ. ಜಿಲ್ಲೆಯಲ್ಲಿ ನಡೆದ ಸಭೆಯಲ್ಲಿ ಮಾಯಾವತಿ ಈ ನಿರ್ಧಾರವನ್ನು ಪ್ರಕಟಿಸಿದರು ಎಂದು ಸಿಂಗ್ ಹೇಳಿದರು. ಮಾಯಾವತಿಯವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿರುವ ಆಕಾಶ್ ಆನಂದ್, ೨೦೧೬ ರಲ್ಲಿ ಬಿಎಸ್ಪಿಗೆ ಸೇರ್ಪಡೆಗೊಂಡು ೨೦೧೯ ರಲ್ಲಿ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿ ಪ್ರಮುಖವಾಗಿ ಕಾಣಿಸಿಕೊಂಡಿದ್ದರು.
ರಾಜಸ್ಥಾನ ಸಿಎಂ ಆಯ್ಕೆ ಕಗ್ಗಂಟು
ಜೈಪುರ, ಡಿ. ೧೦: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಒಂದು ವಾರ ಕಳೆದಿದ್ದು, ಬಿಜೆಪಿ ಇಂದು ಛತ್ತೀಸ್ಗಢ ಸಿಎಂ ಆಯ್ಕೆ ಮಾಡಿದೆ. ಆದರೆ ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಅವರ ಹೆಸರು ಸಿಎಂ ಹುದ್ದೆಗೆ ಮುಂಚೂಣಿಯಲ್ಲಿದೆ. ಈ ನಡುವೆ ೧೦ ಶಾಸಕರು ವಸುಂಧರಾ ರಾಜೆ ಅವರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಸಭೆಯನ್ನು ಇನ್ನಷ್ಟೇ ನಡೆಸಬೇಕಿದ್ದು, ಸಭೆಯಲ್ಲಿ ಸಿಎಂ ಆಯ್ಕೆ ನಡೆಯಲಿದೆ. ಅಜಯ್ ಸಿಂಗ್, ಬಾಬು ಸಿಂಗ್ ಸೇರಿದಂತೆ ಹಲವರು ರಾಜೆ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ವಸುಂಧರಾ ರಾಜೆ ಈಗಾಗಲೇ ೨ ಬಾರಿ ರಾಜಸ್ಥಾನ ಸಿಎಂ ಆಗಿದ್ದಾರೆ. ರಾಜಸ್ಥಾನ ಬಿಜೆಪಿ ಶಾಸಕರು- ವಸುಂಧರಾ ರಾಜೆ ಭೇಟಿಯನ್ನು ಶಕ್ತಿ ಪ್ರದರ್ಶನದ ಭಾಗವೆಂದೇ ವಿಶ್ಲೇಷಿಸಲಾಗುತ್ತಿದೆ. ವಸುಂಧರಾ ರಾಜೆ ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಿಎಂ ಆಯ್ಕೆ ಸಂಬAಧ ರಾಜಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಈಗಾಗಲೇ ವೀಕ್ಷಕರನ್ನು ಕಳಿಸಿದೆ.
ಅರ್ಜುನ ಸಾವು - ತನಿಖಾ ಸಮಿತಿ ರಚನೆ
ಹಾಸನ, ಡಿ. ೧೦: ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ೧೫ ದಿನದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ದಸರಾ ಆನೆ ಅರ್ಜುನನನ್ನು ಕಳೆದುಕೊಂಡಿದ್ದು ದುಃಖಕರ. ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ನೋವು ತಂದಿದೆ. ಅರ್ಜುನನಿಗೆ ನಾವು ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟಿçÃಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.
ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ : ಮೂವರ ಬಂಧನ
ನವದೆಹಲಿ, ಡಿ. ೧೦: ಶ್ರೀ ರಾಷ್ಟಿçÃಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ ೫ ರಂದು ರಾಜಸ್ಥಾನದ ಜೈಪುರದಲ್ಲಿರುವ ಅವರ ಮನೆಯಲ್ಲಿ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗೊಗಮೇಡಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸುತ್ತಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಇತ್ತೀಚೆಗೆ ಹೊರಬಿದ್ದಿತ್ತು. ಆರೋಪಿಗಳನ್ನು ಜೈಪುರದ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗಢದ ನಿತಿನ್ ಫೌಜಿ ಎಂದು ಪೊಲೀಸರು ಗುರುತಿಸಿದ್ದಾರೆ ಮತ್ತು ಅವರ ಬಂಧನಕ್ಕೆ ಮಾಹಿತಿ ನೀಡುವವರಿಗೆ ೫ ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿತ್ತು.