ಶನಿವಾರಸಂತೆ, ಡಿ. ೧೦: ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಭಾರತಿ ವಿದ್ಯಾಸಂಸ್ಥೆ ಸಹಭಾಗಿತ್ವದಲ್ಲಿ ೨ ದಿನಗಳ ಕಾಲ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ಮತ್ತು ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಂಜೀವ ಬಾಬಾಜಿ ಹಣಬರ ತಂಡ, ಬಾಲಕಿಯರ ವಿಭಾಗದಲ್ಲಿ ರಾಮನಗರದ ಪ್ರಿಯಾಂಕ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.
ಬಾಲಕರ ವಿಭಾಗದಲ್ಲಿ ಹಾಸನ ಜಿಲ್ಲೆಯ ಮೋಹಿತ್ ಮತ್ತು ತಂಡ, ಶನಿವಾರಸಂತೆ, ಡಿ. ೧೦: ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಭಾರತಿ ವಿದ್ಯಾಸಂಸ್ಥೆ ಸಹಭಾಗಿತ್ವದಲ್ಲಿ ೨ ದಿನಗಳ ಕಾಲ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ಮತ್ತು ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಂಜೀವ ಬಾಬಾಜಿ ಹಣಬರ ತಂಡ, ಬಾಲಕಿಯರ ವಿಭಾಗದಲ್ಲಿ ರಾಮನಗರದ ಪ್ರಿಯಾಂಕ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.
ಬಾಲಕರ ವಿಭಾಗದಲ್ಲಿ ಹಾಸನ ಜಿಲ್ಲೆಯ ಮೋಹಿತ್ ಮತ್ತು ತಂಡ, ಅಧಿಕಾರಿಗಳಲ್ಲಿ ಮನವಿ ಮಾಡಿದರು. ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಹರಪಳ್ಳಿ ರವೀಂದ್ರ ಮಾತನಾಡಿ, ಪುಟ್ಟ ಗ್ರಾಮವೊಂದರಲ್ಲಿ ದೊಡ್ಡ ಕಾರ್ಯಕ್ರಮ ನಡೆಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ ಏಕಾಗ್ರತೆ ಮುಖ್ಯವಾಗಿದ್ದು ಏಕಾಗ್ರತೆ ಇಲ್ಲವಾದಲ್ಲಿ ಗುರಿ ಸಾಧಿಸಲು ಸಾಧ್ಯವಿಲ್ಲ. ಸತತ ಅಭ್ಯಾಸದೊಂದಿಗೆ ಗುರಿ ಸಾಧಿಸಬಹುದು. ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಚರಿತ್ರೆಯನ್ನು ಓದಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪುಟ್ಟರಾಜು, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎನ್.ಕೆ.ಅಪ್ಪಸ್ವಾಮಿ ಮಾತನಾಡಿದರು.
ಸಮಾರಂಭದಲ್ಲಿ ಖ್ಯಾತ ಕಬಡ್ಡಿ ಆಟಗಾರ ತಮ್ಮಣ್ಣಿ, ತೀರ್ಪುಗಾರರಾದ ಕೃಷ್ಣಮೂರ್ತಿ, ನವೀನ್, ಚಂದ್ರ ಶೇಖರ್, ಹರೀಶ್, ಗಿರಿಧರ್ ಇತರ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.
ಭಾರತಿ ವಿದ್ಯಾಸಂಸ್ಥೆ ನಿರ್ದೇಶಕ ಎನ್.ಬಿ.ನಾಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಕಾಂತರಾಜ್, ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಂ.ಜಗನ್ ಪಾಲ್, ಉಪಾಧ್ಯಕ್ಷ ಮಹಮ್ಮದ್ ಪಾಶ, ನಿರ್ದೇಶಕರಾದ ಬಿ.ಟಿ. ರಂಗಸ್ವಾಮಿ, ಮಹಮ್ಮದ್ ಗೌಸ್, ಕೆ.ಸಿ.ಉತ್ತಪ್ಪ, ಪುಷ್ಪಾ, ನಿವೃತ್ತ ಮುಖ್ಯ ಶಿಕ್ಷಕ ಸಿ.ಎಲ್.ಸುಬ್ಬಯ್ಯ, ನಿವೃತ್ತ ಪ್ರಾಂಶುಪಾಲ ಸಿ.ಎಂ.ಪುಟ್ಟಸ್ವಾಮಿ, ಪಿಯು ಕಾಲೇಜ್ ಪ್ರಾಂಶುಪಾಲ ಎಸ್.ಜೆ.ಅಶೋಕ್. ಮುಖ್ಯಶಿಕ್ಷಕ ಪಿ.ನರಸಿಂಹ ಮೂರ್ತಿ, ಪದವಿ ಕಾಲೇಜ್ ಪ್ರಾಂಶುಪಾಲ ದಯಾನಂದ್, ವಿವಿಧ ಜಿಲ್ಲೆಯ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಭವಾನಿ ಪ್ರಾರ್ಥಿಸಿ ದರು, ಉಪನ್ಯಾಸಕ ಸೋಮಶೇಖರ್ ಸ್ವಾಗತಿಸಿ, ಉಪನ್ಯಾಸಕಿ ಮಧು ನಿರೂಪಿಸಿ, ಪ್ರಾಂಶುಪಾಲ ಎಸ್.ಜೆ. ಅಶೋಕ್ ವಂದಿಸಿದರು.