ಸೋಮವಾರಪೇಟೆ, ಡಿ. ೧೦: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. ೧೩ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಅಧ್ಯಕ್ಷೆ ತಾರಾ ಸುಧೀರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನೋಡಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕರಾದ ಎಚ್.ಆರ್. ಶೇಖರ್ ಪಾಲ್ಗೊಳ್ಳಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಜನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.