ಮಡಿಕೇರಿ, ಡಿ. ೧೦: ಮಾನವ ಹಕ್ಕುಗಳ ದಿನಾಚರಣೆಯ ಪ್ರಮುಖ ಉದ್ದೇಶ ಮಾನವ ಹಕ್ಕುಗಳ ರಕ್ಷಣೆ, ಅರಿವು ಮತ್ತು ನೆರವು ಎಂದು ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಹೇಳಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಬೇಕೇ ಹೊರತು ಮಾನವ ಹಕ್ಕನ್ನು ಉಲ್ಲಂಘಿಸಬಾರದು. ರಾಜ್ಯ ಸರ್ಕಾರದ ಮಾನವ ಹಕ್ಕುಗಳ ಆಯೋಗವು ನಿತ್ಯ ದೈನಂದಿನ ಚಟುವಟಿಕೆಗಳಲ್ಲಿ ಯಾವುದು ಮಾನವ ಹಕ್ಕು ಉಲ್ಲಂಘನೆಯಾಗುವುದು ಹಾಗೂ ಸರಿ-ತಪ್ಪುಗಳನ್ನು ವಿವರವಾಗಿ ತಿಳಿಸುತ್ತದೆ.
ನಮ್ಮ ಬದುಕನ್ನು ಅರ್ಥಪೂರ್ಣ ವನ್ನಾಗಿಸಿ ತೃಪ್ತಿದಾಯಕವಾಗುವಂತೆ ಮಾಡುವಂತಹ ಮೂಲಭೂತ ಅರ್ಹತೆಗಳು ಹಾಗೂ ಸ್ವಾತಂತ್ರ‍್ಯಗಳನ್ನು ಮಾನವ ಹಕ್ಕುಗಳೆಂದು ಕರೆಯಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು "ಮಾನವ ಹಕ್ಕು ರಕ್ಷಣೆ" ಎಂಬ ಆ್ಯಪ್ ಬಿಡುಗಡೆಗೊಳಿಸಿದೆ ಸರ್ಕಾರಿ ಕಚೇರಿ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬರು ಈ ಆ್ಯಪ್ ಅನ್ನು ಬಳಸಲು ಉಪ ವಿಭಾಗಾಧಿಕಾರಿ ಸೂಚಿಸಿದರು.
ಮಾನವ ಹಕ್ಕುಗಳ ಪರಿದಿ ವ್ಯಾಪಕ ಸ್ವರೂಪದ್ದಾಗಿದೆ. ಅದು ನಾಗರಿಕ ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಹಕ್ಕುಗಳನ್ನು ಒಳಗೊಂಡಿವೆ. ಇವುಗಳಲ್ಲಿ ಅತಿ ಮುಖ್ಯವಾದವು ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು ಆಗಿದೆ ಎಂದರು.
ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು ಇತರ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ. ರಾಜ್ಯದ ಯಾವುದೇ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿAದಾಗಲಿ ಯಾವುದೇ ವ್ಯಾಪಕ ಸ್ವರೂಪದ್ದಾಗಿದೆ. ಅದು ನಾಗರಿಕ ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಹಕ್ಕುಗಳನ್ನು ಒಳಗೊಂಡಿವೆ. ಇವುಗಳಲ್ಲಿ ಅತಿ ಮುಖ್ಯವಾದವು ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು ಆಗಿದೆ ಎಂದರು.
ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು ಇತರ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ. ರಾಜ್ಯದ ಯಾವುದೇ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿAದಾಗಲಿ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ ಕಲ್ಯಾಣ ಅಧಿಕಾರಿ ಡಾ.ಆನಂದ್, ಸಮಗ್ರ ಶಿಕ್ಷಣ ಇಲಾಖೆಯ ಉಪ ಯೋಜನಾ ಸಂಯೋಜಕರಾದ ಸೌಮ್ಯ ಪೊನ್ನಪ್ಪ ಮತ್ತಿತರರು ಇದ್ದರು.