ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ

ಬೆಳಗಾವಿ, ಡಿ. ೧೧: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ತಾ. ೧೩ ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕವಾಗಿ ಬರ ನಿರ್ವಹಣೆ ಮಾಡದಿರುವುದು, ಡಿ. ಕೆ. ಶಿವಕುಮಾರ್ ಅವರ ವಿಷಯದಲ್ಲಿ ತೆಗೆದುಕೊಂಡ ನಿಲುವು ಮತ್ತು ಜಮೀರ್ ಅಹ್ಮದ್ ಅವರ ನಡೆ ಸೇರಿದಂತೆ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಸ್ಪೀಕರ್ ಸ್ಥಾನದ ಕುರಿತು ದುರಹಂಕಾರದ ಹೇಳಿಕೆ ನೀಡಿದ್ದು ಖಂಡನೀಯ. ಜಮೀರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿಯಾಗಲಿ, ಸ್ಪೀಕರ್ ಅವರಾಗಲಿ ಕ್ರಮ ತೆಗೆದುಕೊಳ್ಳಲಿಲ್ಲ. ಸಂವಿಧಾನ ಉಳಿಸಲು ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಜಮೀರ್ ಅಹ್ಮದ್ ಅವರ ಹೇಳಿಕೆ ಖಂಡಿಸಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಭಾರತ ಈಗ ಅಮೃತಕಾಲದಲ್ಲಿದೆ - ಮೋದಿ

ನವದೆಹಲಿ, ಡಿ. ೧೧: ಪ್ರಸಕ್ತ ಅವಧಿಯಲ್ಲಿ ಭಾರತ ಎತ್ತರಕ್ಕೆ ಏರಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಕಸಿತ ಭಾರತ@೨೦೪೭ರ ದೂರದೃಷ್ಟಿಗೆ ಯುವಕರು ಕೊಡುಗೆ ನೀಡಬಹುದಾಗಿರುವ ಅಭಿಯಾನದ ವೇದಿಕೆಯಾಗಿರುವ ವಿಕಸಿತ ಭಾರತ್@೨೦೪೭: ಯುವ ಧ್ವನಿ ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಭಾರತದ ಯುವಜನತೆಯ ಶಕ್ತಿ ಬದಲಾವಣೆಯ ಪ್ರತಿನಿಧಿ ಹಾಗೂ ಬದಲಾವಣೆಯ ಫಲಾನುಭವಿ ಎರಡೂ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. "ಯಾವುದೇ ರಾಷ್ಟçದ ಜೀವಿತದಲ್ಲಿ, ಇತಿಹಾಸ ಅದರ ಅಭಿವೃದ್ಧಿ ಪಯಣದಲ್ಲಿ ಅತ್ಯುತ್ತಮ ಹೆಜ್ಜೆ ಇಡುವುದಕ್ಕೆ ಸಮಯವನ್ನು ಒದಗಿಸುತ್ತದೆ. ಭಾರತ ಈಗ ಅಮೃತಕಾಲದಲ್ಲಿದೆ ಹಾಗೂ ಈ ಅವಧಿ ಭಾರತಕ್ಕೆ ಅಭೂತಪೂರ್ವವಾದ ಜಿಗಿತಕ್ಕೆ ಸೂಕ್ತವಾಗಿದೆ. ಆದ್ದರಿಂದ ಅಮೃತಕಾಲದ ಪ್ರತಿಯೊಂದು ಕ್ಷಣವನ್ನೂ ಸದುಪಯೋಗಪಡಿಸಿ ಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದಾರೆ.

ಜಮೀರ್ ಹೇಳಿಕೆಗೆ ಬಿಜೆಪಿ ಆಕ್ರೋಶ

ಬೆಳಗಾವಿ, ಡಿ. ೧೧: ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿ ನಾಯಕರು ಸಲಾಂ ಸಬ್ ಎಂದು ಕೈ ಮುಗಿದು ನಿಲ್ಲುವಂತೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ತೆಲಂಗಾಣದಲ್ಲಿ ಭಾಷಣ ಮಾಡುವಾಗ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದನ್ನು ವಿರೋಧಿಸಿ ಇಂದು ಕಲಾಪದಲ್ಲಿ ಸಿಡಿದೆದ್ದ ಬಿಜೆಪಿ ನಾಯಕರು ಇದಕ್ಕೆ ಕ್ಷಮೆ ಕೇಳುವಂತೆ ಆಗ್ರಹಿಸಿದರು.ಕಾಂಗ್ರೆಸ್ ಪಕ್ಷ ತನ್ನ ಹೆಸರಿನ ಮುಂದೆ ಎಂ (ಮುಸ್ಲಿಂ) ಪದ ಸೇರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಲಹೆ ನೀಡಿದರು. ಸುವರ್ಣಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತರುವ ರೀತಿಯಲ್ಲಿ ಜಮೀರ್ ಹೇಳಿಕೆ ಕೊಟ್ಟಿದ್ದಾರೆ. ಸ್ಪೀಕರ್ ಸ್ಥಾನ ಒಂದು ರೀತಿ ನ್ಯಾಯಾಧೀಶರ ಸ್ಥಾನದ ಹಾಗೆ. ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪೀಕರ್‌ಗೆ ವಿಶೇಷ ಸ್ಥಾನ ಕೊಟ್ಟಿದ್ದಾರೆ ಎಂದರು.ಜಮೀರ್ ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷ ಬರುವಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಿದ್ದರೂ ಜಮೀರ್ ಹೇಳಿಕೆ ತಪ್ಪು ಎಂದು ಸ್ಪೀಕರ್ ಖಂಡನೆ ಮಾಡಿಲ್ಲ. ಸಿದ್ದರಾಮಯ್ಯ ಈಗಾಗಲೇ ಮುಸ್ಲಿಮರಿಗೆ ೧೦ ಸಾವಿರ ಕೋಟಿ ಕೊಡ್ತೀನಿ ಎಂದಿದ್ದಾರೆ. ಮುಸ್ಲಿಮರನ್ನು ಓಲೈಕೆ ಮಾಡ್ತಿದ್ದಾರೆ. ಅದು ಓಟಿಗಾಗಿ ಎಂದರು.

ಜೆಡಿಎಸ್‌ನ ನೂತನ ರಾಷ್ಟಿçÃಯ ಅಧ್ಯಕ್ಷರಾಗಿ ಸಿ.ಕೆ.ನಾನು!

ಬೆಂಗಳೂರು, ಡಿ. ೧೧: ಜೆಡಿಎಸ್‌ನ ನೂತನ ರಾಷ್ಟಿçÃಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟಿçÃಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇಬ್ರಾಹಿಂ, ‘ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್ ಸಖ್ಯ ಬೆಳೆಸುವುದು ಸರಿಯೇ’ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ. ನಾನು ಕಳೆದ ಅನೇಕ ವರ್ಷಗಳಿಂದ ಜನತಾದಳದಲ್ಲಿ ಇದ್ದೇನೆ. ಹಿಂದಿನ ಸಭೆಗಳಲ್ಲಿ ಪಕ್ಷದ ವರಿಷ್ಠ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರೇ ಜೆಡಿಎಸ್ ಸದ್ಯ ಸಖ್ಯ ಬೆಳೆಸಿರುವ ಕ್ರಮ ಸರಿಯೇ ಎಂಬುದಕ್ಕೆ ಉತ್ತರಿಸಬೇಕು ಎಂದಿದ್ದಾರೆ. ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದು ಇಬ್ರಾಹಿಂ ಗುಡುಗಿದ್ದಾರೆ.

ವಿಶೇಷ ಸ್ಥಾನಮಾನ ರದ್ದಿನ ಕುರಿತು ಪಾಕಿಸ್ತಾನ ಪ್ರತಿಕ್ರಿಯೆ

ಇಸ್ಲಾಮಾಬಾದ್, ಡಿ. ೧೧: ‘ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ೨೦೧೯ರ ಆಗಸ್ಟ್ ೫ರಂದು ರದ್ದುಗೊಳಿಸಿದ ಏಕಪಕ್ಷೀಯ ಹಾಗೂ ಕಾನೂನು ಬಾಹಿರ ಕ್ರಮವನ್ನು ಅಂತರರಾಷ್ಟಿçÃಯ ಕಾನೂನು ಮಾನ್ಯ ಮಾಡುವುದಿಲ್ಲ' ಎಂದು ಪಾಕಿಸ್ತಾನ ಹೇಳಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ ೩೭೦ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಪಾಕಿಸ್ತಾನ ಪ್ರತಿಕ್ರಿಯಿಸಿದೆ. ೨೦೧೯ರ ಆಗಸ್ಟ್ ೫ರಂದು ನವದೆಹಲಿ ಕೈಗೊಂಡ ಕ್ರಮಕ್ಕೆ ಅಂತರರಾಷ್ಟಿçÃಯ ಮಟ್ಟದಲ್ಲಿ ಯಾವುದೇ ಮಾನ್ಯತೆ ಇಲ್ಲ. ಸರ್ಕಾರದ ಆದೇಶಕ್ಕೆ ಪೂರಕವಾಗಿ ಭಾರತದ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೂ ಯಾವುದೇ ಕಾನೂನು ಮೌಲ್ಯಗಳಿಲ್ಲ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಂತೆ ಕಾಶ್ಮೀರದ ಜನರನ್ನು ಸ್ವಯಂ ನಿರ್ಣಯದ ಅನಿರ್ಬಂಧಿತ ಹಕ್ಕುಗಳಿಂದ ಪ್ರತ್ಯೇಕಿಸಲಾಗದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಜಲೀಲ್ ಅಬ್ಬಾಸ್ ಜಿಲಾನಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹೇಳಿದ್ದಾರೆ.

ತನ್ವೀರ್ ಪೀರಾ ಸಂಬAಧಿ ಜೊತೆ ಯತ್ನಾಳ್ ವ್ಯವಹಾರ

ಧಾರವಾಡ, ಡಿ. ೧೧: ಸಮಾರಂಭವೊAದರಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊAಡಿದ್ದ ಮೌಲ್ವಿ ತನ್ವೀರ್ ಪೀರಾ ಅವರಿಗೆ ಐಸಿಸ್ ಸಂಪರ್ಕವಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಸಾಕ್ಷಿ ಬಿಡುಗಡೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಪೀರಾ ಅವರ ಸೋದರ ಮಾವನೊಂದಿಗೆ ಯತ್ನಾಳ್ ಹೊಂದಿರುವ ವ್ಯವಹಾರದ ದಾಖಲೆಗಳನ್ನು ಬಿಡುಗಡೆ ಮಾಡಿದರು. ವಿಜಯಪುರದ ಎಂ.ಜಿ ರಸ್ತೆಯ ವಾರ್ಡ್ ನಂ.೩ರಲ್ಲಿ ಹೋಟೆಲ್ ಟೂರಿಸ್ಟ್ ಕಟ್ಟಿದ್ದಾರೆ. ಇದನ್ನು ಎಂ.ಎA ಪೀರಜಾದೆ ಹಾಗೂ ಯತ್ನಾಳ್ ಒಡೆತನದಲ್ಲಿ ಕಟ್ಟಲಾಗಿದೆ. ಪೀರಜಾದೆಯವರು ಪೀರಾ ಅವರ ತಾಯಿಯ ಸಹೋದರರಾಗಿದ್ದು, ಅವರೊಂದಿಗೆ ಯತ್ನಾಳ್ ಅವರಿಗೆ ೩೦-೪೦ ವರ್ಷಗಳ ವ್ಯವಹಾರಿಕ ಸಂಬAಧವಿದೆ. ಪೀರಾ ಹಾಗೂ ಪೀರಜಾದೆ ಎಲ್ಲರೂ ಸೇರಿ ವ್ಯವಹಾರ ಮಾಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್

ನವದೆಹಲಿ, ಡಿ. ೧೧: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಜೈನಿ ಶಾಸಕ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗುವರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.