ಮಡಿಕೇರಿ, ಡಿ. ೧೦: ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ರಾಷ್ಟçದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಮೊದಲಿಗೆ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ನಂತರದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಚರ್ಚಾ ಸ್ಪರ್ಧೆಯ ತೀರ್ಪು ಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಈ. ಮೋಹನ್, ಯೂನಿಯನ್ ನಿರ್ದೇಶಕ ಕನ್ನಂಡ ಸಂಪತ್, ಕೆ.ಐ.ಸಿ.ಎಂ.ನ ಪ್ರಾಂಶುಪಾಲ ಡಾ. ಆರ್.ಎಸ್. ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ ಅವರು ನಿರ್ವಹಿಸಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ರಾದ ಬಿ.ಎ. ರಮೇಶ್ ಚಂಗಪ್ಪ, ಎನ್.ಎ. ರವಿ ಬಸಪ್ಪರವರುಗಳು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆ: ಪ್ರಥಮ - ರವಿ-ಕಾಕೋಟುಪರಂಬು ಪ್ರೌಢಶಾಲೆ, ದ್ವಿತೀಯ - ಹರ್ಷಿತಾ ಕುಶಾಲಪ್ಪ-ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ, ನಾಪೋಕ್ಲು, ತೃತೀಯ-ಪ್ರಜ್ಞಾ ಕೆ.ಕೆ.-ಶಾಂತಿನಿಕೇತನ ಪ್ರೌಢಶಾಲೆ, ಕೊಡಗರಹಳ್ಳಿ, ಸಮಾಧಾನಕರ ಬಹುಮಾನ - ಕಲ್ಪನಾ ಕೆ.ಎ. -ಹಾಕತ್ತೂರು ಸರ್ಕಾರಿ ಪ್ರೌಢಶಾಲೆ.
ಚರ್ಚಾ ಸ್ಪರ್ಧೆ: ಪ್ರಥಮ - ಮೇಘ ಎಸ್.- ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ದ್ವಿತೀಯ -ಭೂಮಿಕಾ ಎಚ್.ಎಂ.- ವಿವೇಕಾನಂದ ಪದವಿಪೂರ್ವ ಕಾಲೇಜು, ಕುಶಾಲನಗರ, ತೃತೀಯ- ಆಕಾಶ್ ಎಂ. -ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು, ಬಸವನಹಳ್ಳಿ, ಸಮಾಧಾನಕರ ಬಹುಮಾನ - ವಿಪಿನ್ ಎ. ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪಲು.