ಮಡಿಕೇರಿ, ಡಿ. ೧೨: ಅತ್ಯಂತ ಸೂಕ್ಷö್ಮ ಜನಾಂಗ ಕೊಡವರಿಗೆ ಸಾಂವಿಧಾನಿಕ ಭದ್ರತೆಯ ಅಗತ್ಯವಿದೆ, ಈ ದೇಶದ ಸಂವಿಧಾನವೊAದೇ ಕೊಡವರ ಗುರುಪೀಠವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಮೈಸೂರಿನ ಜಯಲಕ್ಷಿö್ಮಪುರಂನ ಕೊಡವ ಸಹಕಾರ ಭವನದಲ್ಲಿ ನಡೆದ ಕೊಡವ ವಿದ್ಯಾರ್ಥಿ ಸಂಘಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡವರಿಗೆ ಕೊಡವ ಗುರುಪೀಠ ಇರಬೇಕು ಎನ್ನುವ ಅಭಿಪ್ರಾಯಗಳಿವೆ. ಆದರೆ ಈ ಹೇಳಿಕೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕೊಡವ ಬುಡಕಟ್ಟು ಸಮುದಾಯದ ಸಾಮಾಜಿಕ ನಂಬಿಕೆಗಳು ಹಾಗೂ ಪೂರ್ವಜರ ಆರಾಧನಾ ಮಾದರಿಗಳಿಗೆ ವಿರುದ್ಧವಾಗಿದೆ. ಈ ರೀತಿಯ ಪ್ರಸ್ತಾಪಗಳು ಸಾಂವಿಧಾನಿಕ ನೈತಿಕತೆಯನ್ನು ಬುಡಮೇಲು ಮಾಡುವ ಪ್ರಯತ್ನವಾಗಿದೆ. ಕೊಡವರು ಭಾರತೀಯ ಶ್ರೇಷ್ಠ ಸಂವಿಧಾನದ ಮೂಲಕವಷ್ಟೇ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದರು.
ರಾಜ್ಯದ ವೈಫಲ್ಯ ಮತ್ತು ದುರಾಡಳಿತವನ್ನು ಮುಚ್ಚಿ ಹಾಕಲು, ಕೊಡವರ ಹಾದಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಸಿಎನ್ಸಿಯ ಸಾಂವಿಧಾನಿಕ ಬೇಡಿಕೆಗಳ ಕುರಿತು ಕೊಡವ ಜನರ ಮೂಲಕವೇ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕರ್ನಲ್ ಬಾಳೆಯಡ ಸುಬ್ರಮಣಿ, ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜAಡ ಗಪ್ಪಣ್ಣ, ಅಖಿಲ ಕೊಡವ ಸಮಾಜ ಯೂತ್ವಿಂಗ್ ಅಧ್ಯಕ್ಷ ಚಮ್ಮಟ್ಟೀರ ಪ್ರವೀಣ್ ಉತ್ತಪ್ಪ, ಕೊಡವ ವಿದ್ಯಾರ್ಥಿ ಸಂಘಗಳ ಒಕ್ಕೂಟ ಅಧ್ಯಕ್ಷ ಮನೆಯಪಂಡ ಕಾರ್ಯಪ್ಪ, ಉಪಾಧ್ಯಕ್ಷ ಚೋಳಪಂಡ ದೇಚಮ್ಮ, ಗೌರವ ಕಾರ್ಯದರ್ಶಿ ಮುಂಡಿಯೊಳAಡ ಮಾಚಯ್ಯ, ಜಂಟಿ ಕಾರ್ಯದರ್ಶಿ ಮೊಟ್ಟೆಯಂಡ ಇಶಾನಿ ಕುಟ್ಟಪ್ಪ, ಖಜಾಂಚಿ ಬಲ್ಯಂಡ ಮೌರ್ಯ, ಜಂಟಿ ಖಜಾಂಚಿ ನಾಯಕಂಡ ತ್ರಿಷಾ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಮಂಡೇಟಿರ ದೇಗುಲ್, ಸಾಂಸ್ಕೃತಿಕ ಮುಖ್ಯಸ್ಥೆ (ಪೊಮ್ಮಕ್ಕ) ಚೆಟ್ಟಿರ ಗ್ರಂಥ ಮತ್ತಿತರರು ಉಪಸ್ಥಿತರಿದ್ದರು.