ಸೋಮವಾರಪೇಟೆ, ಡಿ. ೧೧: ಮುಂದಿನ ವರ್ಷ ಸುವರ್ಣ ಮಹೋತ್ಸವಕ್ಕೆ ಸ್ಥಳೀಯ ಕೊಡವ ಸಮಾಜ ಕಾಲಿಡುತ್ತಿದ್ದು, ಇದರ ಸವಿನೆನಪಿಗಾಗಿ ಸಮಾಜದಲ್ಲಿ ಸಾಂಸ್ಕೃತಿಕ ಕೇಂದ್ರವನ್ನು ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಬಿ. ಅಭಿಮನ್ಯು ಕುಮಾರ್ ಹೇಳಿದರು. ಸಮಾಜದ ಸಭಾಂಗಣದಲ್ಲಿ ನಡೆದ ಕೊಡವ ಸಮಾಜದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಸುವರ್ಣ ಮಹೋತ್ಸವದ ನೆನಪಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಸೇರಿದಂತೆ ಇನ್ನಿತರ ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸುವ ಚಿಂತನೆ ಹೊಂದಲಾಗಿದೆ ಎಂದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೊಡವ ಜನಾಂಗದ ಯುವಕರಿಗೆ ಮತ್ತು ಸೇವೆ ಸಲ್ಲಿಸಿ ನಿವೃತ್ತರಾದವರ ಮಕ್ಕಳ ವಿವಾಹದ ಸಂದರ್ಭದಲ್ಲಿ ಕಲ್ಯಾಣ ಮಂಟಪವನ್ನು ಕೆಲವೊಂದು ಮಾನದಂಡಗಳನ್ನು ವಿಧಿಸಿ ನೀಡುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷರಾದ ಬೊಳಂದAಡ ಕುಟ್ಟಪ್ಪ, ಕಾರ್ಯದರ್ಶಿ ಕೊಚ್ಚೇರ ಅನಿಲ್ ಕುಮಾರ್, ಖಜಾಂಚಿ ಪಾಡೆಯಂಡ ಮುತ್ತಣ್ಣ, ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.