ಮಡಿಕೇರಿ, ಡಿ. ೧೨: ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹಾಲುಗುಂದ ಗ್ರಾಮಸ್ಥರು, ಭಗವತಿ ಯೂತ್ ಕ್ಲಬ್ ಹಾಲುಗುಂದ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ತಾ. ೨೬ ರಿಂದ ೨೯ ರವರೆಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ೭+೨ ಜನರ ಮುಕ್ತ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಂದಿಕAಡ ದಿನೇಶ್ (ಕುಶ) ಮಾಹಿತಿ ನೀಡಿದರು.

ಹಾಲುಗುಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂದಿಕAಡ ದಿನೇಶ್, ಹಾಲುಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಲಾಗಿದ್ದು, ಸಂಘದ ಸಹಕಾರದಿಂದ ತಾ. ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ಮಡಿಕೇರಿ ಗ್ರಾಮಾಂತರ ವೃತ್ತನಿರೀಕ್ಷಕ ಅನೂಪ್ ಮಾದಪ್ಪ ನೆರವೇರಿಸಲಿದ್ದಾರೆ ಎಂದರು.

ತಾ. ೨೮ ರಂದು ಬೆಳಿಗ್ಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ನಡೆಯಲಿದ್ದು, ವಾರ್ಷಿಕೋತ್ಸವದ ಉದ್ಘಾಟನೆಯನ್ನು ಬಿ.ಇ.ಓ ಪ್ರಕಾಶ್ ಅವರು ನೆರವೇರಿಸಲಿದ್ದಾರೆ.

ತಾ. ೨೯ ರಂದು ಮಧ್ಯಾಹ್ನ ಮೂರು ಗಂಟೆಗೆ ಫೈನಲ್ ಪಂದ್ಯ ನಡೆಯಲಿದ್ದು, ಫೈನಲ್ ಪಂದ್ಯದ ಉದ್ಘಾಟನೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರು ಆಗಮಿಸಲಿದ್ದಾರೆ ಎಂದು ಪಂದಿಕAಡ ದಿನೇಶ್ ಮಾಹಿತಿ ನೀಡಿದರು. ಫೈನಲ್ ಪಂದ್ಯದ ಸಮಾರೋಪ ಸಮಾರಂಭದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಎಂ.ಎಲ್.ಸಿ. ಸುಜಾ ಕುಶಾಲಪ್ಪ ಹಾಗೂ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿ, ರಾಷ್ಟçಮಟ್ಟದಲ್ಲಿ ಸಾಧನೆಗೈದ ಹಾಲುಗುಂದ ಗ್ರಾಮದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಹೇಳಿದರು.

ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಂದಿಕAಡ ನಾಗೇಶ್ (ಈಶ್ವರ್) ಮಾತನಾಡಿ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಲ್ಲಿ ನೊಂದಣಿಗೊAಡ ೧೮ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪಂದ್ಯಾವಳಿಯು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಹಾಗೂ ರಾಜ್ಯ ಫುಟ್ಬಾಲ್ ಸಂಸ್ಥೆಯ ನಿಯಮಾವಳಿಯಂತೆ ನಡೆಯಲಿದೆ.

ಜಿಲ್ಲಾ ಫುಟ್ಬಾಲ್ ಸಂಸ್ಥೆಯ, ರಾಷ್ಟçಮಟ್ಟದ ಫುಟ್ಬಾಲ್ ತೀರ್ಪುಗಾರರು ಪಂದ್ಯಾವಳಿಯನ್ನು ನಡೆಸಿಕೊಡಲಿದ್ದು, ೭+೨ ಆಟಗಾರ ಪಂದ್ಯಾವಳಿಯಲ್ಲಿ ರೋಲಿಂಗ್ ಸಬ್ಸ್ಟಿಟ್ಯೂಟ್ ಮಾಡಲು ಅವಕಾಶ ನೀಡಲಾಗಿದೆ.

ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಲ್ಲಿ ನೋಂದಣಿಯಾಗಿರುವ ಕ್ಲಬ್ ಗಳಿಗೆ ಅವಕಾಶ ನೀಡಲಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಆಟಗಾರರು ಸಹ ಪಂದ್ಯಾವಳಿಯಲ್ಲಿ ಭಾಗವಹಿಸ ಬಹುದಾಗಿದೆ.

ಪಂದ್ಯಾವಳಿಯು ೨೫+೨೫ ನಿಮಿಷಗಳಿಗೆ ಸೀಮಿತವಾಗಿದ್ದು, ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ. ೪೦ ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೩೦ ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ವೈಯಕ್ತಿಕ ಬಹುಮಾನಗಳನ್ನು ನೀಡಲಿದ್ದೇವೆ ಎಂದು ನಾಗೇಶ್ (ಈಶ್ವರ್ ) ಮಾಹಿತಿ ನೀಡಿದರು.

ಫೈನಲ್ ಪಂದ್ಯಕ್ಕೂ ಮೊದಲು ಲಯನ್ಸ್ ಸಂಸ್ಥೆಯ ವಿದ್ಯಾರ್ಥಿನಿಯರು ಹಾಗೂ ವೈಷ್ಣವಿ ಫುಟ್ಬಾಲ್ ಕ್ಲಬ್ ಮಹಿಳಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಭಗವತಿ ಯೂತ್ ಕ್ಲಬ್ ಅಧ್ಯಕ್ಷ ಮಚ್ಚೆಟ್ಟೀರ ಮೋಹನ್ ಕಾರ್ಯಪ್ಪ, ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಮೇಕೇರಿರ ವಿಜಯ್, ಬೆಳೆಗಾರರಾದ ಚೆಯ್ಯಂಡ ಭರತ್ ಹಾಜರಿದ್ದರು.