ಮಡಿಕೇರಿ, ಡಿ. ೧೨: ಕೊಡಗು ಜಿಲ್ಲಾ ಯುವ ಒಕ್ಕೂಟದ ೨೦೨೨-೨೩ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೧೫ರಂದು ಬೆಳಿಗ್ಗೆ ೧೧ ಗಂಟೆಗೆ ನೆಹರೂ ಯುವ ಕೇಂದ್ರದ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮೂರು ತಾಲೂಕು ಯುವ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸಲಹೆಗಾರರು ಪಾಲ್ಗೊಳ್ಳಲಿದ್ದಾರೆ.