ಮಡಿಕೇರಿ, ಡಿ. ೧೨: ಜಾರ್ಖಂಡ್ನ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರಿಗೆ ಸಂಬAಧಿ ಸಿದ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದ್ದು, ತಕ್ಷಣವೇ ಸಂಸದನನ್ನು ಬಂಧಿಸ ಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾ ಕಾರರು, ಧೀರಜ್ ಸಾಹು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಂಡೇಪAಡ ಅಪ್ಪಚ್ಚು ರಂಜನ್, ಧೀರಜ್ ಸಾಹು ಮನೆಯಲ್ಲಿ ರೂ. ೬೦೦ ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್ ಲೂಟಿ ಹೊಡೆದ ಹಣ. ದೇಶವನ್ನೇ ಕೊಳ್ಳೆ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ ಎಂದು ಕಿಡಿಕಾರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ, ಸಂಸದ ಧೀರಜ್ ಸಾಹು ಮನೆಯಲ್ಲಿ ಲೆಕ್ಕವಿಲ್ಲದಷ್ಟು ಹಣ ಪತ್ತೆಯಾಗಿದ್ದು, ಮುಂಬರುವ ಲೋಕಸಭಾ ಚುನಾವ ಣೆಗಾಗಿ ಕೂಡಿ ಇಟ್ಟಿದ್ದರು. ಕಾಂಗ್ರೆಸ್ನ ಎಲ್ಲಾ ಮುಖಂಡರ ಮನೆ ಮೇಲೆ ಐಟಿ ದಾಳಿ ನಡೆಯಬೇಕು. ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತ್ತಿರುವ ಕಾಂಗ್ರೆಸ್ನ ರಾಷ್ಟçಮಟ್ಟದ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ವಕ್ತಾರ ಮಹೇಶ್ ಜೈನಿ, ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ ಭಾರತೀಶ್, ನಗರಾಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಬಿ.ಕೆ. ಜಗದೀಶ್ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.