ಕರಿಕೆ, ಡಿ. ೧೩: ಅಯೋಧ್ಯೆಯಿಂದ ತರಲಾಗಿರುವ ಪವಿತ್ರವಾದ ಮಂತ್ರಾಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ತಾಲೂಕಿನ ಪ್ರತೀ ಬೂತ್‌ಗಳಿಗೂ ತಲುಪಿಸುವ ಕಾರ್ಯಕ್ರಮ ಮೂರ್ನಾಡು ಸಮೀಪದ ಕೋಡಂಬೂರು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂತ್ರಾಕ್ಷತೆಯು ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಚಂಡೆ ವಾದ್ಯ ಸಮೇತ ಗ್ರಾಮಸ್ಥರು, ಮಾತೆಯರು ಪೂರ್ಣಕುಂಭ ಸ್ವಾಗತ ಕೋರಿದರು. ಮಂತ್ರಾಕ್ಷತೆಗೆ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಧ್ಯಾಹ್ನ ದೇವಾಲಯ ಸಮಿತಿ ಯಿಂದ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಜರಂಗದಳದ ವಿಭಾಗ ಸಹ ಸಂಯೋಜಕ್ ಮುರುಳಿಕೃಷ್ಣ ೫೦೦ ವರ್ಷಗಳ ಅಯೋಧ್ಯೆ ಶ್ರೀರಾಮ ಮಂದಿರದ ಹೋರಾಟ ಹಾಗೂ ತ್ಯಾಗ ಬಲಿದಾನಗಳನ್ನು ವಿವರಿಸಿದರು. ಆರ್.ಎಸ್.ಎಸ್.ನ ಮಂಗಳೂರು ವಿಭಾಗ ಸಹ ಕಾರ್ಯವಾಹರಾಗಿರುವ ಹರಿಕೃಷ್ಣ ಮಾತನಾಡಿ, ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಹಾಗೂ ಪ್ರಾಣಪ್ರತಿಷ್ಠೆಯು ನಮ್ಮ ಜೀವಿತಾವಧಿಯಲ್ಲಿ ನಡೆಯುತ್ತಿರುವುದು ಹಾಗೂ ಶ್ರೀರಾಮನ ಕಾರ್ಯದಲ್ಲಿ ನಮಗೆಲ್ಲರಿಗೂ ಭಾಗಿಗಳಾಗಲು ಅವಕಾಶ ಸಿಕ್ಕಿರುವುದನ್ನು ನಾವೆಲ್ಲರೂ ಶ್ರದ್ಧಾಭಕ್ತಿಯಿಂದ ಮಾಡುವಂತಾಗ ಬೇಕೆಂದರು.

ಇಡೀ ಸಮಾಜವನ್ನು ಒಂದುಗೂಡಿಸಿಕೊAಡು ಪ್ರತೀ ಮನೆU Àಳಿಗೂ ಅಯೋಧ್ಯೆ ಮಂತ್ರಾಕ್ಷತೆಯನ್ನು ತಲುಪಿಸುವುದು ಹಾಗೂ ಇದೇ ಮುಂಬರುವ ಜನವರಿ ೨೨ ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಪೂಜಾ ವಿಧಿವಿಧಾನಗಳನ್ನು ನಾವೆಲ್ಲರೂ ಕಣ್ತುಂಬಿಕೊAಡು ನಾಡಿನ ಎಲ್ಲಾ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಪೂಜಾ ಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನಡೆಸುವಂತೆ ಕರೆ ನೀಡಿದರು.

ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಶಿವರಾಜ್ ಹಾಗೂ ವಿ.ಹೆಚ್.ಪಿ.ಯ ಚಿ.ನಾ. ಸೋಮೇಶ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವ ಹಿಂದೂ ಪರಿಷತ್ - ಬಜರಂಗದಳ, ಹಿಂದೂ ಜಾಗರಣ ವೇದಿಕೆ, ಬಿ.ಜೆ.ಪಿ. ಸೇರಿದಂತೆ ೫೦೦ ಕ್ಕೂ ಅಧಿಕ ರಾಮಭಕ್ತರು ತಾಲೂಕಿನ ವಿವಿಧೆಡೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆಯನ್ನು ತಮ್ಮ ತಮ್ಮ ಗ್ರಾಮದ ಪ್ರತೀ ಮನೆಗಳಿಗೆ ತಲುಪಿಸಲು ಶ್ವೇತ ವಸ್ತç ಧಾರಿಗಳಾಗಿ ದೇವಾಲಯದ ಅರ್ಚಕರಿಂದ ಸ್ವೀಕರಿಸಿ ನಂತರ ಶ್ರದ್ಧಾಭಕ್ತಿಗಳಿಂದ ಶ್ರೀ ರಾಮ್ ಘೋಷಣೆ ಕೂಗುತ್ತಾ ತಮ್ಮ ತಮ್ಮ ಊರುಗಳಿಗೆ ಕೊಂಡೊಯ್ದರು. ಕೆಲವು ಗ್ರಾಮಗಳಲ್ಲಿ ಮಂತ್ರಾಕ್ಷತೆಯನ್ನು ಮಾತೆಯರು ಕಳಸ ಹಾಗೂ ವಾದ್ಯ ಘೋಷಗಳೊಂದಿಗೆ ಬರಮಾಡಿಕೊಂಡರು.