ಮಡಿಕೇರಿ, ಡಿ. ೧೩: ಸೋಮವಾರಪೇಟೆ ತಾಲೂಕು ಹೆಬ್ಬಾಲೆ ಮತ್ತು ಹುದುಗೂರು ಉಪ ವಲಯ ವ್ಯಾಪ್ತಿಯಲ್ಲಿ ಬರುವ ಹಾರಂಗಿ ಮುಖ್ಯ ನಾಲೆಯ ಎರಡು ಬದಿಗಳಲ್ಲಿ ಕಾಲುವೆಯ ಪುನಶ್ಚೇತನ ಕಾಮಗಾರಿಯನ್ನು ನಿರ್ವಹಿಸಲು ಅಡಚಣೆಯಾದ ೨೮೩ ಇತರ ಜಾತಿಯ ಮರಗಳನ್ನು ಕಡಿದು ತೆರವುಗೊಳಿಸಲು ಹಾರಂಗಿ ಅಣೆಕಟ್ಟೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
ಸಾರ್ವಜನಿಕರು ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ತಾ. ೨೦ ರೊಳಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಸಲ್ಲಿಸುವಂತೆ ತಿಳಿಸಿದೆ. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.