ಮಡಿಕೇರಿ, ಡಿ. ೧೫: ಅರೆಭಾಷೆಯ ಬೆಳವಣಿಗೆಗೆ ಅರೆಭಾಷೆ ಜನಾಂಗದ ಪ್ರತಿಯೊಬ್ಬರು ಕೊಡುಗೆ ನೀಡು ವಂತಾಗಬೇಕು ಎಂದು ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಕರೆ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಗೌಡ ಸಮಾಜ-ಸಂಘಟನೆಗಳ ಸಹಯೋಗದಲ್ಲಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಅರೆಭಾಷೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರೆಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ
(ಮೊದಲ ಪುಟದಿಂದ) ಮನೆಗಳಲ್ಲಿ ಅರೆಭಾಷೆಯನ್ನು ಮಾತನಾಡುವಂತಾಗಬೇಕು. ಭಾಗಮಂಡಲ ವ್ಯಾಪ್ತಿಯಲ್ಲಿ ಶೇ.೭೦ ಕ್ಕೂ ಹೆಚ್ಚು ಜನರು ಅರೆಭಾಷೆ ಮಾತನಾಡುವವರು ವಾಸಿಸುತ್ತಿದ್ದಾರೆ. ಅರೆಭಾಷಿಕರು ಹೆಚ್ಚಿರುವ ಕಡೆಗಳಲ್ಲಿ ಅರೆಭಾಷೆ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತಾಗಬೇಕು ಎಂದು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ಹಲವರು ಶ್ರಮಿಸಿದ್ದಾರೆ. ಅರೆಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಬೆಳೆಸುವತ್ತ ಒತ್ತು ನೀಡಿ ಸಾಂಸ್ಕೃತಿಕ ಸಮಾವೇಶ, ಸಾಹಿತ್ಯ ಸಮ್ಮೇಳನದಂತಹ ಹಲವಾರು ಕಾರ್ಯಕ್ರಮಗಳನ್ನು ತಮ್ಮ ಅವಧಿಯಲ್ಲಿ ಆಯೋಜಿಸಲಾಗಿತ್ತು.
ಅರೆಭಾಷೆಯ ಅಸ್ತಿತ್ವವನ್ನು ಉಳಿಸುವಂತಾಗಬೇಕು ಎಂದ ಅವರು, ‘ಹಿಂಗಾರು’ ತ್ರೆöÊಮಾಸಿಕ ಪತ್ರಿಕೆಯನ್ನು ಪ್ರಕಟಿಸುವ ನಿಟ್ಟಿನಲ್ಲಿ ಸಂಪಾದಕೀಯ ಸಲಹಾ ಸಮಿತಿ ರಚಿಸಿಕೊಂಡು ಹೊರ ತರುವಂತಾಗಬೇಕು ಎಂದು ಸಲಹೆ ನೀಡಿದರು.
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅವರು ಮಾತನಾಡಿ ಅರೆಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಅರೆಭಾಷೆ ಮಾತನಾಡುವುದರ ಜೊತೆಗೆ, ಓದುವ ಮತ್ತು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಲೇಖನ, ಕಥೆ, ಕವನ, ಬರೆಯುವ ಮೂಲಕ ಅರೆಭಾಷೆ ಬೆಳವಣಿಗೆಗೆ ಮುಂದಾಗಬೇಕು ಎಂದು ಸಲಹೆಯಿತ್ತರು.
ಅರೆಭಾಷೆಯಲ್ಲಿ ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳ ಪ್ರಕಟಣೆ ಸೇರಿದಂತೆ ಸಾಕ್ಷö್ಯಚಿತ್ರ, ಚಿತ್ರಕಲಾ ಶಿಬಿರದಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿದೆ ಎಂದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಎಲ್ಲರೂ ಶ್ರಮಿಸಿದ್ದಾರೆ. ಅರೆಭಾಷೆಯನ್ನು ಮುಂದಿನ ಜನಾಂಗಕ್ಕೂ ತಿಳಿಸುವ ನಿಟ್ಟಿನಲ್ಲಿ ಅರೆಭಾಷೆ ಮಾತನಾಡುವಂತಾಗಬೇಕು ಎಂದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯ ಚಟುವಟಿಕೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟವು ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ. ಇದರಿಂದ ಹಲವು ಕಾರ್ಯಕ್ರಮಗಳ ಆಯೋಜನೆಗೆ ಸಹಕಾರಿಯಾಗಿದೆ ಎಂದು ನುಡಿದರು.
ನಿವೃತ್ತ ಪೊಲೀಸ್ ಅಧೀಕ್ಷಕರಾದ ಚೊಕ್ಕಾಡಿ ಅಪ್ಪಯ್ಯ ಮಾತನಾಡಿ ಕೋಡಿ ಕುಶಾಲಪ್ಪ ಗೌಡ ಮತ್ತು ಪುರುಷೋತ್ತಮ ಬಿಳಿಮಲೆ ಅವರು ಬರೆದಿರುವ ಪುಸ್ತಕವನ್ನು ಎಲ್ಲಾ ಅರೆಭಾಷಿಕರು ಓದುವಂತಾಗಬೇಕು ಎಂದರು. ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ ಮಾತನಾಡಿ ಮಾತೃ ಭಾಷೆಯಾದ ಅರೆಭಾಷೆಯನ್ನು ಕನ್ನಡದ ಜೊತೆಗೆ ಕಲಿಯಬೇಕು ಎಂದರು. ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್ ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಚಿನ್ನಸ್ವಾಮಿ ಮಾತನಾಡಿ ಹಿಂಗಾರು ತ್ರೆöÊಮಾಸಿಕ ಪುಸ್ತಕ ಪ್ರಕಟಿಸುವ ನಿಟ್ಟಿನಲ್ಲಿ ಸಂಪಾದಕೀಯ ಸಮಿತಿ ರಚಿಸಿಕೊಂಡು ನಿಯಮಾನುಸಾರ ತ್ವರಿತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ಗೌಡ ಸಮಾಜ ಹಾಗೂ ಸಂಘಟನೆಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಇತರರು ಪಾಲ್ಗೊಂಡಿದ್ದರು. ಕೊಡಗು ಗೌಡ ಮಹಿಳಾ ಒಕ್ಕೂಟದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಬೈತಡ್ಕ ಜಾನಕಿ ಬೆಳ್ಯಪ್ಪ ಅರೆಭಾಷೆ ದಿನಾಚರಣೆ ಮಹತ್ವದ ಕುರಿತು ಹಾಡು ಹಾಡಿದರು. ಪ್ರೇಮ ರಾಘವಯ್ಯ ಮತ್ತು ರೇವತಿ ರಮೇಶ್ ತಂಡ ನಾಡಗೀತೆ ಹಾಡಿತು.
ರಿಜಿಸ್ಟಾçರ್ ಚಿನ್ನಸ್ವಾಮಿ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಕೊಡಗು ಗೌಡ ವಿದ್ಯಾಸಂಘದ ಕಾರ್ಯದರ್ಶಿ ಪೇರಿಯನ ಉದಯ್ ಕುಮಾರ್ ವಂದಿಸಿದರು.