ಮಡಿಕೇರಿ, ಡಿ. ೧೫: ಪೊನ್ನಂಪೇಟೆ ತಾಲೂಕಿಗೆ ಸಂಬAಧಿಸಿದ ಪ್ರಮುಖ ಸಮಸ್ಯೆಯಾದ ತಾಲೂಕು ಕಚೇರಿಯಲ್ಲಿನ ಸಿಬ್ಬಂದಿಗಳ ಕೊರತೆ, ಸರ್ವೆ ವಿಭಾಗದ ಸ್ಥಳಾಂತರ ಹಾಗೂ ಗೋಣಿಕೊಪ್ಪದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕ ಹಿತರಕ್ಷಣಾ ಸಮಿತಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಎ.ಎಸ್. ಪೊನ್ನಣ್ಣ ಅವರನ್ನು ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎ.ಎಸ್. ಕಟ್ಟಿ ಮಂದಯ್ಯ; ಪೊನ್ನಂಪೇಟೆ ತಾಲೂಕು ಅಸ್ತಿತ್ವಕ್ಕೆ ಬಂದ ನಂತರ ಸಮರ್ಪಕ ಸಿಬ್ಬಂದಿಗಳ ನೇಮಕವಾಗದೆ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕ ಕೆಲಸ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಅಲ್ಲದೆ, ಸರ್ವೆ ವಿಭಾಗವು ವೀರಾಜಪೇಟೆಯಿಂದ ಪೊನ್ನಂಪೇಟೆಗೆ ಸ್ಥಳಾಂತರವಾಗಿಲ್ಲ, ಹಾಗಾಗಿ ಸಾರ್ವಜನಿಕರ ಅಲೆದಾಟ ಹೆಚ್ಚಾಗಿ ಭ್ರಷ್ಟಾಚಾರ ಹೆಚ್ಚಾಗಿದೆ. ಇದು ರೈತಾಪಿ ಜನರ ಮೇಲೆ ನೇರ ದುಷ್ಪರಿಣಾಮ ಬೀರುತ್ತಿದೆ. ಕೂಡಲೇ ಸಿಬ್ಬಂದಿಗಳ ನೇಮಕಾತಿಯೊಂದಿಗೆ ಸರ್ವೆ ವಿಭಾಗವನ್ನು ಪೊನ್ನಂಪೇಟೆಗೆ ಸ್ಥಳಾಂತರಿಸಬೇಕೆAದು ಮನವಿ ಮಾಡಿದರು.

ಪ್ರಮುಖ ನಗರವಾಗಿರುವ ಗೋಣಿಕೊಪ್ಪಲು ಬಸ್ ನಿಲ್ದಾಣವನ್ನು ಕೆಡವಿ ೧೦ ವರ್ಷಗಳಾದರೂ ಇನ್ನೂ ಕೂಡ ನೂತನ ಬಸ್ ನಿಲ್ದಾಣ ನಿರ್ಮಾಣವಾಗಿರುವದಿಲ್ಲ. ಇದರಿಂದ ಪ್ರಯಾಣಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ನಿಲ್ದಾಣಕ್ಕೆ ರೂ.೧೦ ಕೋಟಿ ಬಿಡುಗಡೆಯಾಗಿದೆ ಎಂದು ಹೇಳಲಾಗಿತ್ತು, ಆದರೆ, ಅದು ಏನಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಶಾಸಕರು ಮಧ್ಯಸ್ಥಿಕೆ ವಹಿಸಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಯಾಗಿದ್ದ ನಂಜುAಡೇಗೌಡ ಆವರು ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನೆಲೆ ಯಲ್ಲಿ ಸರಕಾರ ಅವರನ್ನು ಅಮಾನತ್ತಿನಲ್ಲಿಟ್ಟಿದೆ. ಆದರೆ, ಅವರನ್ನು ಬೇರೆಡೆಗೆ ಬಡ್ತಿ ನೀಡಿ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಇಲ್ಲವಾದಲ್ಲಿ ಸಮಿತಿ ವತಿಯಿಂದ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವದೆಂದು ಹೇಳಿದರು. ಸಮಿತಿಯ ಕಾರ್ಯಾಧ್ಯಕ್ಷ ಬಾಚೀರ ಕಾಶಿ ಕಾರ್ಯಪ್ಪ ಮಾತನಾಡಿ; ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಇರುವದರಿಂದ ಸಾರ್ವಜನಿಕರನ್ನು ಸತಾಯಿಸ ಲಾಗುತ್ತಿದೆ. ಲಂಚ ನೀಡಿದರೆ ಮಾತ್ರ ಕೆಲಸ ಆಗುತ್ತಿದೆ. ಅಲ್ಲದೆ, ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಜಾಗ ಸಾಕಾಗುವದಿಲ್ಲ ಎಂಬ ಕಾರಣ ನೀಡಿ ವಿಳಂಬ ಮಾಡಲಾಗುತ್ತಿದೆ. ೧೦ ವರ್ಷಗಳಾದರೂ ಇನ್ನೂ ಆಗಿಲ್ಲ. ಈಗಿನ ಶಾಸಕರು ಗಮನ ಹರಿಸಬೇಕಾಗಿದೆ. ಬೆಳೆಯುತ್ತಿರುವ ಪಟ್ಟಣದಲ್ಲಿ ವಾಹನದಟ್ಟಣೆಯನ್ನು ತಡೆಗಟ್ಟಬೇಕಿದೆ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಸಣ್ಣುವಂಡ ರತ್ನ ಸುಬ್ಬಯ್ಯ, ಕಾರ್ಯದರ್ಶಿ ಅರಮಣಮಾಡ ಸತೀಶ್ ದೇವಯ್ಯ, ಸಂಘಟನಾ ಕಾರ್ಯದರ್ಶಿ ಕೋಳೇರ ಸನ್ನು ಕಾವೇರಪ್ಪ ಇದ್ದರು.