ಕುಶಾಲನಗರ, ಡಿ. ೧೫: ಪಾರ್ಲಿಮೆಂಟ್‌ನಲ್ಲಿ ನಡೆದ ಘಟನೆ ಖಂಡಿಸಿ ಪ್ರಕರಣಕ್ಕೆ ಸಂಬAಧಿಸಿದAತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಮುಖ್ಯರಸ್ತೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಮಾನವ ಸರಪಳಿ ರಚಿಸಿ ಘಟನೆಗೆ ಪ್ರಮುಖ ಕಾರಣಕರ್ತರಾದ ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರ ವಿರುದ್ಧ ಘೋಷಣೆ ಕೂಗಿದರು. ಕೇಂದ್ರದಲ್ಲಿ ಮೋದಿ ಸರ್ಕಾರ ಭದ್ರತಾ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕ್ಷೇತ್ರದಲ್ಲಿ ಅನಾವಶ್ಯಕ ಗೊಂದಲ ಮೂಡಿಸುತ್ತಾ ಕಾಲ ಕಳೆದ ಪ್ರತಾಪ್ ಸಿಂಹ ಈ ಘಟನೆಗೆ ಪ್ರಮುಖ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.ತಕ್ಷಣ ಅವರ ಮೇಲೆ ನಿಯಮ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕೆÀ್ಷ ಕೆ.ಪಿ. ಚಂದ್ರಕಲಾ, ಪ್ರತಾಪ್ ಸಿಂಹ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಸಂದರ್ಭ ಪಕ್ಷದ ಪ್ರಮುಖರಾದ ನಟೇಶ್ ಗೌಡ, ನಗರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಕಲೀಮುಲ್ಲಾ, ಜೆ ಫಿಲೋಮಿನಾ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸದಸ್ಯರು ಇದ್ದರು.