ಮಡಿಕೇರಿ, ಡಿ. ೧೫: ಹಿರಿಯ ನಾಗರಿಕರ ವೇದಿಕೆಯ ಮಹಾಸಭೆಯು ತಾ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಹಿರಿಯರ ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ ಮಾರಮಡ ಮಾಚಮ್ಮ ಅವರನ್ನು ಸನ್ಮಾನಿಸಲಾಗುತ್ತದೆ. ಡಾ. ಎಚ್.ಆರ್. ಸರಸ್ವತಿ ಅವರು ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆ ಹಿರಿಯರಿಗೆ ಹೇಗೆ ಪರಿಣಾಮಕಾರಿಯಾಗಬಲ್ಲದು ಎಂಬುದನ್ನು ತಿಳಿಸಲಿದ್ದಾರೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ತಿಮ್ಮಯ್ಯ ಅವರು ತಿಳಿಸಿದ್ದಾರೆ.