ಮುಳ್ಳೂರು, ಡಿ. ೧೫: ರಕ್ತದಾನ ದಿಂದ ಆರೋಗ್ಯ ವೃದ್ದಿಸುವುದರ ಜೊತೆಯಲ್ಲಿ ರಕ್ತದೊತ್ತಡ, ಮಧುಮೇಹ ಮುಂತಾದ ಸಮಸ್ಯೆಯನ್ನು ತಡೆಗಟ್ಟಲು ಪೂರಕ ಎಂದು ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶೋಕ್ ಹೇಳಿದರು.
ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮಡಿಕೇರಿ ಎಚ್ಡಿಎಫ್ಸಿ ಬ್ಯಾಂಕ್, ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು. ಮನುಷ್ಯನ ದೇಹದಲ್ಲಿ ಐದರಿಂದ ಆರೂವರೆ ಲೀಟರಿನಷ್ಟು ರಕ್ತ ಇದ್ದು, ರಕ್ತದಾನ ಮಾಡುವ ವ್ಯಕ್ತಿಯಿಂದ ಕೇವಲ ೩೫೦ ಮಿ.ಗ್ರಾಂ. ನಷ್ಟು ರಕ್ತವನ್ನು ತೆಗೆದುಕೊಳ್ಳಲಾಗುತ್ತದೆ. ಇದರಿಂದ ರಕ್ತದಾನ ಮಾಡಲು ಭಯಪಡ ಬೇಕಾಗಿಲ್ಲ ರಕ್ತದಾನ ಮಾಡುವು ದರಿಂದ ಆರೋಗ್ಯ ವೃದ್ಧಿಸುತ್ತದೆ. ಜೊತೆಯಲ್ಲಿ ರಕ್ತದ ಅವಶ್ಯಕತೆ ಇರುವ ಮತ್ತೊಬ್ಬ ವ್ಯಕ್ತಿಗೆ ರಕ್ತದಾನ ಮಾಡಿದ ಹೆಮ್ಮೆಯ ಮನೋಭಾವನೆ ಮೂಡುತ್ತದೆ ಎಂದರು. ಪ್ರತಿಯೊಬ್ಬರು ತನ್ನ ದೇಹದಲ್ಲಿ ಹೆಚ್ಚು ರಕ್ತ ಇರುವಂತೆ ನೋಡಿಕೊಳ್ಳಬೇಕು. ಇದರಿಂದ ದೇಹದ ಪ್ರತಿಯೊಂದು ಅಂಗಾAಗ ಗಳಿಗೆ ರಕ್ತ ಸಂಚಾರವಾಗುತ್ತದೆ ಹಾಗೂ ರಕ್ತದಾನ ಮಾಡುವುದರಿಂದ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹದ ಕೊರತೆ ನಿವಾರಣೆಯಾಗುತ್ತದೆ ಎಂದರು.
ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ರಕ್ತವನ್ನು ಕಾರ್ಖಾನೆ ಗಳಲ್ಲಿ ಉತ್ಪಾದಿಸಲಾಗುವುದಿಲ್ಲ. ಮನುಷ್ಯನ ದೇಹದಲ್ಲಿರುವ ಅಮೂಲ್ಯವಾದ ವಸ್ತು ಇದಾಗಿದ್ದು ರಕ್ತದಾನವು ಇತರೆ ದಾನಗಳಿಗಿಂತ ಶ್ರೇಷ್ಠವಾಗಿದ್ದು ರಕ್ತದಿಂದ ಮತ್ತೊಬ್ಬನ ಜೀವ ಉಳಿಸಲು ಸಹಾಯವಾಗುತ್ತದೆ ಎಂದರು.
ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್, ಶÀಸ್ತç ಚಿಕಿತ್ಸೆ, ಹೆರಿಗೆ, ಅಪಘಾತ ಮುಂತಾದ ಸಂದರ್ಭಗಳಲ್ಲಿ ರೋಗಿಗಳಿಗೆ ರಕ್ತದ ಅಗತ್ಯ ಇರುತ್ತದೆ. ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹದ ಕೊರತೆ ಇರುವುದರಿಂದ ಇದು ನಿವಾರಣೆ ಯಾಗಲು ರಕ್ತದಾನ ಶಿಬಿರಗಳ ಅವಶ್ಯಕತೆ ಇದೆ ಎಂದರು.
ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಮಾತನಾಡಿ, ರಕ್ತದಾನವು ಶ್ರೇಷ್ಠ ಕಾರ್ಯವಾಗಿದ್ದು ಈ ನಿಟ್ಟಿನಲ್ಲಿ ಕಳೆದ ಐದು ವರ್ಷಗಳಿಂದ ಅರೆಭಾಷೆ ಗೌಡ ಸಮಾಜದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಜೊತೆಗೂಡಿ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದೇವೆ. ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡಲು ಯುವಕ ಯುವತಿಯರು ಮುಂದೆ ಬರಬೇಕು ಇದರಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ನಿವಾರಣೆಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಡಿಕೇರಿ ಎಚ್ಡಿಎಫ್ಸಿ ಬ್ಯಾಂಕ್ ವ್ಯವಸ್ಥಾಪಕ ನಾರಾಯಣ್ ರಾಜೇಂದ್ರ, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಡಾ.ದಿಲೀಪ್, ಅರೆಭಾಷೆ ಗೌಡ ಸಮಾಜದ ಉಪಾಧ್ಯಕ್ಷ ಭಟ್ಯನ ಈರಪ್ಪ, ಕಾರ್ಯದರ್ಶಿ ಕುಯುಮುಡಿ ಜಯಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಪರಿವೀಕ್ಷಕ ಪ್ರವೀಣ್ಕುಮಾರ್, ಆಸ್ಪತ್ರೆ ಸಿಬ್ಬಂದಿ, ರಕ್ತನಿಧಿ ಕೇಂದ್ರದ ಸಿಬ್ಬಂದಿ ಅರೆಭಾಷೆ ಗೌಡ ಸಮಾಜದ ಸದಸ್ಯರು ಹಾಜರಿದ್ದರು. ಶಿಬಿರದಲ್ಲಿ ಸ್ಥಳೀಯ ಐಟಿಐ ಕೇಂದ್ರದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.