ವೀರಾಜಪೇಟೆ, ಡಿ. ೧೪: ನಿನ್ನೆ ದಿನ ಲೋಕಸಭೆ ಕಲಾಪಕ್ಕೆ ನುಗ್ಗಿ ದುಷ್ಕರ್ಮಿಗಳು ಕಲರ್ ಗ್ಯಾಸ್ ಸಿಡಿಸಿ ಆತಂಕ ಸೃಷ್ಟಿಸಿದ ಘಟನೆಗೆ ಸಂಬAಧಿಸಿದAತೆ ಗಡಿಯಾರ ಕಂಬದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ರಾಜ್ಯ ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ಸಂಸತ್ ಭವನಕ್ಕೆ ಸಂಸದರಲ್ಲದ ವ್ಯಕ್ತಿಗಳು ನುಗ್ಗಿ ಆತಂಕ ಸೃಷ್ಟಿಸಲು ಸಂಸದ ಪ್ರತಾಪ್ ಸಿಂಹ ಅವರೆ ಕಾರಣ ಎಂದು ಆರೋಪಿಸಿದ ಅವರು, ಪ್ರತಾಪ್ ಸಿಂಹ ಅವರನ್ನು ಸಂಪುಟದಿAದ ಹೊರಗಿಟ್ಟು ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಪುರಸಭೆ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮಾತನಾಡಿ ಕೇವಲ ಚುನಾವಣೆ ಸಮಯದಲ್ಲಿ ಕೊಡಗಿಗೆ ಭೇಟಿ ನೀಡುವ ಪ್ರತಾಪ್ ಸಿಂಹ ಅವರು ಕೊಡಗಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಸಾಬೀತು ಪಡಿಸಲಿ ಎಂದರು.
ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿದರು. ಪ್ರತಿಭಟನೆ ವೇಳೆ ಪ್ರತಾಪ್ ಸಿಂಹ ಅವರ ಭಾವಚಿತ್ರವನ್ನು ಪ್ರಭಟನಾಕಾರರು ದಹಿಸಿದರು. ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ಡಿ.ಪಿ. ರಾಜೇಶ್, ಮತೀನ್, ಮರ್ವಿನ್ ಲೋಬೋ, ರಕ್ಷಿತ್ ಚೆಂಗಪ್ಪ, ಗೋಪಾಲಕೃಷ್ಣ, ಜೋಕೀಂ, ಶಬೀರ್, ಕೊಳುಮಂಡ ರಫೀಕ್, ಮಹದೇವ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.