ವೀರಾಜಪೇಟೆ, ಡಿ. ೧೪: ಅಮ್ಮತ್ತಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಕಣ್ಣಂಗಾಲದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಣ್ಣಂಗಾಲ ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕಣ್ಣಂಗಾಲದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷೆ ರೇಖಾ ಬಿ.ಎಸ್. ವಹಿಸಿಕೊಂಡಿದ್ದರು. ನಂಜನಗೂಡು ಧಾರ್ಮಿಕ ಉಪನ್ಯಾಸಕ ಯೋಗಾನಂದ ಸ್ವಾಮಿ ನಮ್ಮ ಸಂಸ್ಕöÈತಿ, ಹಿರಿಮೆ ಹಾಗೂ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹಾಲುಗುಂದ, ಚೆಂಬೆಬೆಳ್ಳೂರು ಹಾಗೂ ಕಣ್ಣಂಗಾಲ ಒಕ್ಕೂಟಗಳ ಒಕ್ಕೂಟ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಒಂಟಿಯAಗಡಿಯ ಪ್ರಗತಿಪರ ಕೃಷಿಕರಾದ ಮಚ್ಚಾರಂಡ ದಮಯಂತಿ ಉತ್ತಪ್ಪ ಹೊಸ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರಿಸಿದರು.

ಧರ್ಮಸ್ಥಳ ಸಂಘದ ಯೋಜನಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು ವಿಮಾ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿ ಸುಬ್ರಮಣಿ ಅವರು ಗ್ರಾಮ ಅಭಿವೃದ್ಧಿ ಯೋಜನೆಯ ನವ ಜೀವನ ಸಮಿತಿ ಹಾಗೂ ಮದ್ಯವರ್ಜನ ಶಿಬಿರಗಳ ಮಹತ್ವದ ಬಗ್ಗೆ ಮಾತನಾಡಿದರು.

ಬಳಿಕ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಕ್ಷೇತ್ರದಿಂದ ಒದಗಿಸಿದ ವೀಲ್ ಚೇರ್‌ಅನ್ನು ಫಲಾನುಭವಿಗೆ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗ್ರೀಷ್ಮ ರಂಜನ್ ಕುಮಾರ್, ಹಚ್ಚಿನಾಡುವಿನ ಪ್ರಗತಿಪರ ಕೃಷಿಕ ಬಿ.ಸಿ. ಮಂಜುನಾಥ್, ಕೃಷಿ ಪತ್ತಿನ ಸಹಕಾರ ಸಂಘ ಒಂಟಿಯAಗಡಿಯ ಮಾಜಿ ಅಧ್ಯಕ್ಷ ಕೆ.ಪಿ. ನಾಗರಾಜು, ಉದ್ಯಮಿ ಸಿ.ಕೆ. ಶಿಜು, ಕಣ್ಣಂಗಾಲ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಪಿ. ಚಿನ್ನಪ್ಪ ರಾಬಿನ್, ಮುತ್ತಪ್ಪ ದೇವಸ್ಥಾನ ಒಂಟಿಯAಗಡಿ ಅಧ್ಯಕ್ಷ ಅಚ್ಚುತನ್, ಒಂಟಿಯAಗಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರಾಜೇಶ್ವರಿ ಬಿ.ಎನ್., ವೀರಾಜಪೇಟೆ ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ದೇವಕಿ, ಕಣ್ಣಂಗಾಲ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸವಿತಾ, ವಲಯ ಮೇಲ್ವಿಚಾರಕ ಸುಜೀರ್ ಕುಲಾಲ್, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಅಮ್ಮತಿ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.