*ಗೋಣಿಕೊಪ್ಪ, ಡಿ. ೧೫: ಚೌಡೇಶ್ವರಿ ಯುವಕ ಸಂಘದ ವತಿಯಿಂದ ತಾ. ೩೧ ರಂದು ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿನಾಯಕ ನಗರದ ಮೈದಾನದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಆಟಗಾರರು ಆಧಾರ್ ಕಾರ್ಡ್ ನೀಡಬೇಕಾಗಿದ್ದು, ಅಂದು ಬೆಳಿಗ್ಗೆ ೧೦ ಗಂಟೆಯಿAದ ಪಂದ್ಯ ಆರಂಭಗೊಳ್ಳಲಿದೆ. ಸುಮಾರು ೨೦ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ವಿಜೇತ ೪ ತಂಡಗಳಿಗೆ ಬಹುಮಾನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ೯೭೪೧೨೦೩೧೧೩, ೮೨೯೬೫೧೩೩೩೭ ಸಂಪರ್ಕಿಸಬಹುದಾಗಿದೆ ಎಂದರು. ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಅಫ್ರೋಸ್, ಸಹ ಕಾರ್ಯದರ್ಶಿ ಮುಸ್ತಫಾ, ಖಜಾಂಚಿ ರವಿಶಂಕರ್, ಸದಸ್ಯ ಬಷೀರ್ ಇದ್ದರು.