ಐಗೂರು, ಡಿ. ೧೫: ಗರಗಂದೂರು ಬಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಕೊನೆಯ ದೀಪೋತ್ಸವ ಪೂಜಾ ಕಾರ್ಯಕ್ರಮ ಜರುಗಿತು.
ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಸಮಿತಿ ಅಧ್ಯಕ್ಷರು, ಸದಸ್ಯರು, ಜ್ಞಾನಜ್ಯೋತಿ ಮತ್ತು ಭಾಗ್ಯಜ್ಯೋತಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ಪೂಜಾ ಕಾರ್ಯಕ್ರಮದ ನಂತರ ನೆರೆದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.