ನಂಜುAಡಪ್ಪನವರ ವರದಿಯ ಅನುಷ್ಠಾನ-ಸಿದ್ದರಾಮಯ್ಯ
ಬೆಳಗಾವಿ, ಡಿ. ೧೫: ಹಿಂದುಳಿದ ತಾಲೂಕುಗಳ ಕುರಿತ ನಂಜುAಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತçಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸಭೆಯಲ್ಲಿಂದು ಉತ್ತರ ಕರ್ನಾಟಕ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಂಜುAಡಪ್ಪ ವರದಿ ಸಲ್ಲಿಕೆಯಾಗಿ ೨೧ ವರ್ಷಗಳಾಗಿದ್ದು, ಅವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ ೬೧,೩೩೦ ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. ಇದರಲ್ಲಿ ಸುಮಾರು ರೂ. ೪೨,೦೦೦ ಕೋಟಿ ಖರ್ಚು ಮಾಡಲಾಗಿದೆ. ನಂಜುAಡಪ್ಪ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ ೩೨,೪೩೩.೪೩ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ ಎಂದು ಸದನಕ್ಕೆ ಅಂಕಿ ಅಂಶ ಸಹಿತಿ ಮಾಹಿತಿ ನೀಡಿದರು. ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು ೨೦೦೦ ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, ೫೦೦ ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು. ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು ೧೫೦೦ ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ ಎಂದರು.
ಮಹಿಳೆಯನ್ನು ವಿವಸ್ತçಗೊಳಿಸಿದ ಘಟನೆ-ನಡ್ಡಾ ಖಂಡನೆ
ನವದೆಹಲಿ, ಡಿ. ೧೫: ಬೆಳಗಾವಿ ದಲಿತ ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಥಳಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರ ಖಂಡಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ವಿರುದ್ಧ ಇಂತಹ ಘೋರ ಅಪರಾಧಗಳು ನಿಯಮಿತವಾಗಿ ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದ ಗ್ರಾಮಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಪಕ್ಷದ ಮಹಿಳಾ ಸಂಸದರನ್ನು ಒಳಗೊಂಡ ಐವರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ಅವರು ರಚಿಸಿದ್ದಾರೆ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಾ. ೧೧ ರಂದು ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಯುವಕನೊಬ್ಬ ತಾನು ಪ್ರೇಮಿಸಿದ್ದ ಯುವತಿಯ ಜೊತೆ ಪರಾರಿಯಾಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿ ಸಂಬAಧಿಕರು ಯುವಕನ ತಾಯಿಯನ್ನು ಬೆತ್ತಲೆ ಮಾಡಿ ಆಕೆಯನ್ನು ಸಾರ್ವಜನಿಕವಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬAಧ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ ಎಂಟು ಮಂದಿಗಾಗಿ ಶೋಧ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದೆ.
ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ
ಜೈಪುರ, ಡಿ. ೧೫: ತಮ್ಮ ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು. ಭಜನ್ ಲಾಲ್ ಹೊರತಾಗಿ ಬಿಜೆಪಿ ರಾಜಸ್ಥಾನದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳ ಸೂತ್ರವನ್ನು ಹೆಣೆದಿತ್ತು. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಮುಖ್ಯಮಂತ್ರಿ ಮತ್ತು ಮೂವರೂ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ರೂ. ೫ ಸಾವಿರ ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ ರಕ್ಷಣಾ ಸಚಿವಾಲಯ
ನವದೆಹಲಿ, ಡಿ. ೧೫: ಭಾರತ ರಕ್ಷಣಾ ಸಚಿವಾಲಯ ಎಲೆಕ್ಟಾçನಿಕ್ ಫ್ಯೂಜ್ ಖರೀದಿಗೆ ೫,೦೦೦ ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿದೆ. ಬಿಇಎಲ್ ಪುಣೆ ಸಂಸ್ಥೆಯೊAದಿಗೆ ಒಪ್ಪಂದ ನಡೆದಿದ್ದು ಸೇನೆಗೆ ಈ ಸಂಸ್ಥೆ ೧೦ ವರ್ಷಗಳ ಕಾಲ ಎಲೆಕ್ಟಾçನಿಕ್ ಫ್ಯೂಜ್ಗಳನ್ನು ಪೂರೈಕೆ ಮಾಡಲಿದೆ. ಭಾರತೀಯ ಸೈನ್ಯದ ಫಿರಂಗಿದಳದ ದೂರಗಾಮಿ-ದಾಳಿ ಸಾಮರ್ಥ್ಯವನ್ನು ಹೆಚ್ಚಿಸುವ ಕ್ರಮವಾಗಿ ಸಚಿವಾಲಯ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಒಟ್ಟು ವೆಚ್ಚ ರೂ. ೫,೩೩೬.೨೫ ಕೋಟಿ ಆಗಿದೆ. ಇದೊಂದು ಮಹತ್ವದ ಒಪ್ಪಂದವಾಗಿದೆ ಎಂದು ಹೇಳಿರುವ ರಕ್ಷಣಾ ಸಚಿವಾಲಯ ‘ಭಾರತೀಯ ಉದ್ಯಮದಿಂದ ಭಾರತೀಯ ಸೈನ್ಯಕ್ಕೆ ಮದ್ದುಗುಂಡುಗಳ ತಯಾರಿಕೆ', ಯೋಜನೆಯಡಿಯಲ್ಲಿ ೧೦ ವರ್ಷಗಳ ದೀರ್ಘಕಾಲೀನ ಅವಶ್ಯಕತೆಗಾಗಿ ಸರ್ಕಾರದ ಉಪಕ್ರಮದ ಭಾಗವಾಗಿ ಸಹಿ ಹಾಕಲಾಗಿದೆ ಎಂದು ತಿಳಿಸಿದೆ. ಆಮದುಗಳನ್ನು ಕಡಿಮೆ ಮಾಡಲು, ಮದ್ದುಗುಂಡು ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಲು, ನಿರ್ಣಾಯಕ ತಂತ್ರಜ್ಞಾನಗಳನ್ನು ಪಡೆಯಲು ಮತ್ತು ಪೂರೈಕೆ ಸರಪಳಿಯಲ್ಲಿ ಸಮಸ್ಯೆಯಾಗದಂತೆ ಎಚ್ಚರ ವಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.