ಕುಶಾಲನಗರ, ಡಿ. ೧೬: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಡಾ. ಎಚ್ ನರಸಿಂಹಯ್ಯ ಪ್ರಶಸ್ತಿಗೆ ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಭಾಜನರಾಗಿದ್ದಾರೆ.

೨೦೨೩ನೇ ಸಾಲಿನ ಪ್ರಶಸ್ತಿಗೆ ರಾಜ್ಯದಲ್ಲಿ ೩೭ ಸಾಧಕರು ಆಯ್ಕೆಯಾಗಿದ್ದು, ಕೊಡಗು ಜಿಲ್ಲೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಶಂಭುಲಿAಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷರಾದ ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ ೩೦ರಂದು ರಾಯಚೂರಿನಲ್ಲಿ ನಡೆಯಲಿರುವ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.