ವೀರಾಜಪೇಟೆ, ಡಿ. ೧೭: ವೀರಾಜಪೇಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ತೋಮರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಪೂಜಾ ಸಮಿತಿಯ ಅಧ್ಯಕ್ಷÀ ಅರುಣ ಕೆ.ಎಸ್. ವಹಿಸಿದ್ದರು.

ವೀರಾಜಪೇಟೆ ಸ.ಪ್ರ.ದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಸವರಾಜು ಕೆ. ಪಾಲ್ಗೊಂಡು ನಮ್ಮ ಸಂಸ್ಕöÈತಿ ಧಾರ್ಮಿಕ ಆಚರಣೆ ಮಹತ್ವ, ಧರ್ಮ ಕಾರ್ಯಗಳಿಂದ ಆಗುವ ಒಳಿತುಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೆ.ಧ.ಗ್ರಾ. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು, ವಿಮಾ ಕಾರ್ಯಕ್ರಮ, ವಿಪತ್ತು ನಿರ್ವಹಣೆ ಕಾರ್ಯಕ್ರಮ, ಮಾಸಾಶನ, ನಮ್ಮೂರು ನಮ್ಮ ಕೆರೆ, ಜನ ಮಂಗಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ, ತೋರ ಗ್ರಾಮದ ಪ್ರಗತಿಪರ ಕೃಷಿಕÀ ಕೆ.ಡಿ ಪ್ರಭುಕುಮಾರ್, ಯೋಜನೆಯ ಯೋಜನಾಧಿಕಾರಿ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮೀನಾಕ್ಷಿ, ಜಯಂತಿ, ಕೆ.ಎಂ. ರಾಮಯ್ಯ, ವೀರಾಜಪೇಟೆ ವಲಯ ಮೇಲ್ವಿಚಾರಕರಾದ ನಾಗರಾಜ್, ವಿಜಯಕುಮಾರ, ಸುನಿತಾ ಉಪಸ್ಥಿತರಿದ್ದರು. ವಲಯದ ಪ್ರಗತಿ ವರದಿಯನ್ನು ತೇಜಸ್ವಿನಿ ಮಂಡಿಸಿದರು. ಕಾರ್ಯ ಕ್ರಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ವೀರಾಜಪೇಟೆ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ತೋಮರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.