ಮಡಿಕೇರಿ, ಡಿ. ೧೭: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೨೨ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://.shಠಿ.ಞಚಿಡಿಟಿಚಿಣಚಿಞಚಿ.gov.iಟಿ

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ರೂ. ೧.೦೦ ಲಕ್ಷ. ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ

ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ-ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿ ಸಲ್ಲಿಸಲು ೨೦೨೪ ರ ಜನವರಿ ೧೦ ಕೊನೆಯ ದಿನವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೧೯೦೨ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.