ಬೆಂಗಳೂರು, ಡಿ. ೧೭:ಕೇರಳ ದಲ್ಲಿ ಓಮಿಕ್ರಾನ್ ರೂಪಾಂತರಿ ‘ಜೆಎನ್-೧’ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊAಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಜೆಎನ್-೧ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ಧಗೊಂಡು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು.
ಪ್ರಕರಣಗಳು ಕಂಡುಬAದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನು ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.