ಪೊನ್ನAಪೇಟೆ, ಡಿ. ೧೮: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಈ ಬಾರಿ ಆಯೋಜಿಸಲು ಉದ್ದೇಶಿಸಲಾಗಿರುವ ೧೫ನೇ ವರ್ಷದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ `ಮುಸ್ಲಿಂ ಕಪ್-೨೦೨೪' ಮುಂದಿನ ಜನವರಿ ೧೯ ರಿಂದ ೨೧ ರವರೆಗೆ ವೀರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಲಿದೆ.
ಜಿಲ್ಲೆಯ ಮುಸ್ಲಿಂ ಜಮಾಅತ್ ತಂಡಗಳ ನಡುವೆ ಮೂರು ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಗೆ ಅಗತ್ಯವಿರುವ ಸಿದ್ಧತೆಗಳನ್ನು ಇದೀಗ ಆರಂಭಿಸಲಾಗಿದೆ ಎಂದು ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪಿ. ಎ. ಹನೀಫ್ ತಿಳಿಸಿದ್ದಾರೆ.
ಪಂದ್ಯಾವಳಿಯ ಆಯೋಜನೆಗೆ ಸಂಬAಧಿಸಿದAತೆ ವೀರಾಜಪೇಟೆಯಲ್ಲಿ ಸಂಸ್ಥೆಯ ವತಿಯಿಂದ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೨೫ ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಪಂದ್ಯಾವಳಿಯನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು ರೂಪುರೇಷೆ ತಯಾರಾಗಿದ್ದು, ಜಿಲೆಯ ವಿವಿಧೆಡೆಯ ದಾನಿಗಳ ಮತ್ತು ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವ ಆಶಾಭಾವನೆ ಹೊಂದಲಾಗಿದೆ. ಈಗಾಗಲೇ ಪಂದ್ಯಾವಳಿಗೆ ಸಂಬAಧಿಸಿದAತೆ ಕ್ರೀಡಾಪಟುಗಳಿಂದ ಉತ್ತಮ ಸ್ಪಂದನ ದೊರೆಯುತ್ತಿದ್ದು, ಈ ಬಾರಿ ೬೦ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
೨೦೦೯ರಿಂದ ಆರಂಭಿಸಲಾದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ ೨೦೧೯ ರವರೆಗೆ ನಿರಂತರವಾಗಿ ಜರುಗಿದೆ. ಬಳಿಕ ಎದುರಾದ ಕೋವಿಡ್ ತಲ್ಲಣ ಕಾಲಘಟ್ಟದಲ್ಲಿ ಪಂದ್ಯಾವಳಿಯನ್ನು ಅನಿವಾರ್ಯ ಕಾರಣಗಳಿಂದ ನಡೆಸಲು ಸಾಧ್ಯವಾಗಲಿಲ್ಲ. ಮೂರು ವರ್ಷದ ಬಳಿಕ ಮುಂದಿನ ಜನವರಿಯಲ್ಲಿ ನಡೆಯಲಿರುವ ಈ ಪಂದ್ಯಾವಳಿಯನ್ನು ಮತ್ತಷ್ಟು ಅದ್ದೂರಿಯಾಗಿ ಮತ್ತು ಯೋಜನಾಬದ್ಧವಾಗಿ ನಡೆಸಲು ತೀರ್ಮಾನಿಸಲಾಗಿದೆ. ಪಂದ್ಯಾವಳಿಗೆ ಸಂಬAಧಿಸಿದAತೆ ಈಗಾಗಲೇ ಜಿಲ್ಲೆಯ ಎಲ್ಲಾ ಜಮಾಅತ್ತುಗಳಿಗೆ ಮಾಹಿತಿ ರವಾನಿಸಲಾಗಿದೆ. ನಿಗಧಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ರೂ. ೩೦೦೦ ಪ್ರವೇಶ ಶುಲ್ಕದೊಂದಿಗೆ ತಂಡಗಳ ಹೆಸರನ್ನು ನೋಂದಾಯಿಸಲು ಮುಂದಿನ ಜ.೧೨ರವರೆಗೆ ಅಂತಿಮ ಗಡುವು ನೀಡಲಾಗಿದೆ ಎಂದು ಮಾಹಿತಿ ನೀಡಿದ ಹನೀಫ್, ಪ್ರೇಕ್ಷಕರ ಅನುಕೂಲಕ್ಕಾಗಿ ವೀರಾಜಪೇಟೆ ತಾಲೂಕು ಮೈದಾನದ ಸುತ್ತಲೂ ಗ್ಯಾಲರಿ ನಿರ್ಮಿಸುವ ಕಾರ್ಯವನ್ನು ಜನವರಿ ಮೊದಲ ವಾರದಿಂದ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎA. ಇಸ್ಮಾಯಿಲ್ ಮಾತನಾಡಿ, ಆಯಾ ಜಮಾಅತ್ ತಂಡಗಳನ್ನು ಹೊರತುಪಡಿಸಿ ಬರುವ ಬೇರೆ ಯಾವುದೇ ತಂಡಗಳಿಗೆ ಪಂದ್ಯಾವಳಿಯಲ್ಲಿ ಆಡಲು ಅವಕಾಶವಿರುವುದಿಲ್ಲ. ಸಂಬAಧಿಸಿದ ಜಮಾಅತ್ ವ್ಯಾಪ್ತಿಯ ಸದಸ್ಯರು ಆಯಾ ಜಮಾಅತ್ತು ತಂಡದಲ್ಲಲ್ಲದೆ ಬೇರೆ ಜಮಾಅತ್ ತಂಡಗಳನ್ನು ಪ್ರತಿನಿಧಿಸುವಂತಿಲ್ಲ ಎಂದು ಪಂದ್ಯಾವಳಿಯ ನಿಯಮಗಳನ್ನು ವಿವರಿಸಿದರಲ್ಲದೆ, ಪಂದ್ಯಾವಳಿಯಲ್ಲಿ ವಿಜೇತರಾಗುವ ಪ್ರಥಮ, ದ್ವಿತೀಯ ಮತ್ತು ತೃತೀಯ ತಂಡಗಳಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ಈ ಬಾರಿ ವಿಶೇಷವಾಗಿ ಮರದಿಂದ ಕೆತ್ತಲಾದ ವಿನೂತನ ಪಾರಿತೋಷಕ ವನ್ನು ನೀಡಲಾಗುವುದು. ಆಸಕ್ತರು ಪಂದ್ಯಾವಳಿಯ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ ೯೬೮೬೩೯೫೭೩೧, ೧೯೯೪೫೬೩೫೧೫೮, ೯೪೪೯೯ ೮೯೦೧೮ ಅನ್ನು ಸಂಪರ್ಕಿಸುವAತೆ ಕೋರಿದರು.
ಸಭೆಯಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪದಾಧಿಕಾರಿ ಗಳಾದ ಹೆಚ್. ಎ. ಹಂಸ. ಕರೀಂ ಕಡಂಗ, ಮೊಹಮ್ಮದ್ ರಾಫಿ ಕೋಳುಮಂಡ ರಫೀಕ್, ಕೆ.ಎಸ್. ಸೂಫಿ, ಏಜಾಜ್ ಅಹಮದ್, ಜಲೀಲ್ ಮಂದಮಾಡ ಮುನೀರ್ ಮೊದಲಾದವರು ಉಪಸ್ಥಿತರಿದ್ದರು.