ಪೊನ್ನಂಪೇಟೆ, ಡಿ. ೧೭: ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟಿçÃಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಭಿರಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಕ್ರೆöÊಮ್ಗಳ ಬಗ್ಗೆ ಗೋಣಿಕೊಪ್ಪ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಮಾದಪಂಡ ಕೆ. ಪೂವಣ್ಣ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಓದಿನ ಕಡೆಗಷ್ಟೇ ಗಮನ ಹರಿಸಬೇಕು. ಮಾದಕ ಪದಾರ್ಥಗಳ ಸೇವನೆಯಿಂದ ತಮ್ಮ ವ್ಯಕ್ತಿತ್ವ ಮತ್ತು ಸಮಾಜವನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹೀಗಾಗಿ, ಅಲ್ಪ ಸಂತೋಷಕ್ಕಾಗಿ ಮಾದಕ ವ್ಯಸನಿಗಳಾಗದೆ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಖಿನ್ನತೆಯಿಂದ ಹೊರಬರಲು ಉತ್ತಮ ಪುಸ್ತಕಗಳ ಓದಬೇಕು.
ಒಬ್ಬ ವ್ಯಕ್ತಿಯ ಬದುಕಿನಲ್ಲಿ ಬದಲಾವಣೆಯನ್ನು ಕಂಡುಕೊಳ್ಳಲು ಪುಸ್ತಕಗಳ ಓದಿನಿಂದ ಸಾಧ್ಯವಾಗಬಲ್ಲದು. ಉತ್ತಮ ಪುಸ್ತಕಗಳಿಗಿಂತ ಬೇರೆ ಸ್ನೇಹಿತರಿರಲು ಸಾಧ್ಯವಿಲ್ಲ.
ಒಮ್ಮೆ ಓದಿನ ರುಚಿ ಹತ್ತಿಸಿಕೊಂಡರೆ ಖಿನ್ನತೆಗೆ ಒಳಗಾಗುವುದನ್ನು ತಪ್ಪಿಸುವುದರ ಜತೆಗೆ ಇದರ ಪರಿಣಾಮದಿಂದ ಮಾದಕ ವ್ಯಸನಿಗಳಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಸಲಹೆ ನೀಡಿದರು.
ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಎಂ. ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎ.ಎಂ. ಡಯಾನ ಸೋಮಯ್ಯ, ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಗಾಯತ್ರಿ ಮತ್ತು ಸ್ವಯಂ ಸೇವಕರು ಇದ್ದರು.