ಸಿದ್ದಾಪುರ, ಡಿ. ೧೭: ವೀರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು.
ಡಿಜಿಟಲ್ ಪರದೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಪಿಎಂ ಮುದ್ರಾ ಯೋಜನೆ, ಪಿಎಂ ಉಜ್ವಲ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಜನತೆಗೆ ತಿಳಿಸಲಾಯಿತು.
ಈ ವೇಳೆ ಪಾಲಿಬೆಟ್ಟ ಬ್ಯಾಂಕ್ನ ವ್ಯವಸ್ಥಾಪಕ ಸಜೀವ್, ಮಾತನಾಡಿ, ದಿಲ್ಲಿಯಿಂದ ಹಳ್ಳಿಯವರೆಗೆ ಭಾರತ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶವಾಗಿದೆ ಎಂದರು.
ಈ ಸಂದರ್ಭ ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಕುಂಞಣ್ಣ, ಸದಸ್ಯ ಚಂದ್ರ, ಬ್ಯಾಂಕ್ ಆಫ್ ಬರೋಡ ಸಿದ್ದಾಪುರ ವ್ಯವಸ್ಥಾಪಕಿ ಗೀತಾ, ಪಲ್ಲವಿ, ಧರ್ಮೇಶ್, ಮೀನಾಕ್ಷಿ, ಸಾರ್ವಜನಿಕರು ಹಾಜರಿದ್ದರು.