ಕುಶಾಲನಗರ, ಡಿ.೧೮: ದಿನೇಶ್ ಗುಂಡೂರಾವ್ ಅವರು ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಜಿಲ್ಲೆಯ ವೈದ್ಯಾಧಿಕಾರಿಗಳು, ಸ್ಥಳೀಯ ಮುಖಂಡರು ಅವರನ್ನು ಸ್ವಾಗತಿಸಿದರು.
ಜಿಲ್ಲೆಯ ಗಡಿಭಾಗ ಕುಶಾಲನಗರದಲ್ಲಿ ಶಾಸಕ ಡಾ. ಮಂಥರ್ಗೌಡ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ. ರಾಜೇಶ್ವರಿ, ಡಾ. ಸತೀಶ್ ಕುಮಾರ್, ಡಾ. ನಂಜುAಡಯ್ಯ, ಡಾ. ಅನಿಲ್ ಧವನ್, ತಾಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಪಕ್ಷದ ಪ್ರಮುಖರಾದ ಧರ್ಮಜ ಉತ್ತಪ್ಪ, ವಿ.ಪಿ. ಶಶಿಧರ್, ಕೆ.ಪಿ. ಚಂದ್ರಕಲಾ, ಪ್ರಮೋದ್ ಮುತ್ತಪ್ಪ ಮತ್ತಿತರರು ಬರಮಾಡಿಕೊಂಡರು.
ಸಚಿವರು ಕುಶಾಲನಗರ ಪಟ್ಟಣದಲ್ಲಿರುವ ನಮ್ಮ ಕ್ಲಿನಿಕ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜೊತೆ ಚರ್ಚೆ ನಡೆಸಿದರು. ನಂತರ ಸಚಿವ ದಿನೇಶ್ ಗುಂಡೂರಾವ್ ಅವರು ಅವರ ಸೋದರ ಸಂಬAಧಿ ಮಂಜುನಾಥ ಗುಂಡೂರಾವ್ ಅವರ ಮನೆಗೆ ತೆರಳಿ ಉಪಹಾರ ಸ್ವೀಕರಿಸಿದರು. ತಮ್ಮ ಹುಟ್ಟೂರಾದ ಕುಶಾಲನಗರದಲ್ಲಿ ಸಚಿವರು ತಮ್ಮ ಬಾಲ್ಯವನ್ನು ನೆನಪಿಸುವದ ರೊಂದಿಗೆ ತನ್ನ ಸಹಪಾಠಿಗಳ ಕ್ಷೇಮ ಸಮಾಚಾರವನ್ನು ವಿಚಾರಿಸಿದರು.ಕುಶಾಲನಗರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಡಾ. ಮಂಥರ್ ಗೌಡ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸರ್ಕಾರಿ ಯೋಜನೆಗಳು ಹಾಗೂ ಇನ್ನೂ ಆಗಬೇಕಾದ ವಿವಿಧ ಕ್ರಿಯಾಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಸಚಿವರು ಅವರ ಸೋದರ ಸಂಬAಧಿ ಮಂಜುನಾಥ ಗುಂಡೂ ರಾವ್ ಅವರ ನಿವಾಸಕ್ಕೆ ತೆರಳಿದ ಸಂದರ್ಭ ಚರ್ಚಿಸಿದ ಶಾಸಕರು ನೂತನ ಕುಶಾಲನಗರ ತಾಲೂಕಿಗೆ ಕಾವೇರಿ ತಾಲೂಕು ಎಂದು ನಾಮಕರಣ ಮಾಡುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದು, ಕುಶಾಲನಗರದಲ್ಲಿ ಮಾಜಿ ಮುಖ್ಯಮಂತ್ರಿ ಗುಂಡೂರಾಯರ ಪ್ರತಿಮೆ ನಿರ್ಮಾಣ, ಕುಶಾಲನಗರದಲ್ಲಿ ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯ ರಸ್ತೆ ಸಾರಿಗೆ ಡಿಪೋ, ಮಿನಿ ವಿಮಾನ ನಿಲ್ದಾಣ ಸ್ಥಾಪನೆ, ರೈಲ್ವೇ ಸಂಪರ್ಕ ಯೋಜನೆ, ಕುಶಾಲನಗರ ಮಡಿಕೇರಿ ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದು, ಹಾರಂಗಿ ಹೂಳೆತ್ತುವುದು ಮತ್ತು ಅಭಿವೃದ್ಧಿ ಯೋಜನೆ, ಕುಶಾಲನಗರ ತಾಲೂಕು, ಭವನ ನಿರ್ಮಾಣ, ಕೂಡಿಗೆ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದು ಮತ್ತಿತರ ಕ್ಷೇತ್ರದ ಅಭಿವೃದ್ಧಿ ಯೋಜನೆಗಳು ಹಾಗೂ ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.
ಸಂಬAಧಿಸಿದ ಎಲ್ಲಾ ಯೋಜನೆಗಳಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುವ ಮೂಲಕ ಸರ್ಕಾರದಿಂದ ಒದಗಿಸಬೇಕಾದ ಅನುದಾನಗಳ ಬಗ್ಗೆ ತಾನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪ್ರಯತ್ನಿಸುವುದಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಕುಶಾಲನಗರ: ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಸಂಸ್ಥೆಯ ನಡುವಿನ ಒಪ್ಪಂದದ ಮೂಲಕ ನಮನ್ ಹೆಸರಿನ ಗ್ರಾಮೀಣ ಮಟ್ಟದ ಸರ್ವಾಂಗೀಣ ಮಾನಸಿಕ ಆರೋಗ್ಯದ ಕಾರ್ಯಕ್ರಮವನ್ನು ದೇಶವ್ಯಾಪಿ ಕಾರ್ಯಗತಗೊಳಿಸುವ ಉದ್ದೇಶದಿಂದ ದೇಶದಲ್ಲಿ ಜಾರಿಗೆ ತರಲಾಯಿತು.
ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕುಶಾಲನಗರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಕಚೇರಿಯಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದರು.