ಮಡಿಕೇರಿ, ಡಿ. ೧೯: ಬಿರುನಾಣಿಯ ಮರೆನಾಡು ಪ್ರೌಢಶಾಲೆಯ ೨೦೨೩-೨೪ನೇ ಸಾಲಿನ ೬೧ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಆಡಳಿತ ಮಂಡಳಿಯ ಅಧ್ಯಕ್ಷೆ ಕಾಳಿಮಾಡ ಬಿ. ರಶಿಕ ಕಾವೇರಪ್ಪ ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವು ಶಾಲಾ ಮೈದಾನದಲ್ಲಿ ಕ್ರೀಡೋತ್ಸವ ವನ್ನು ಆಯೋಜಿಸಲಾಗಿತ್ತು. ಆಡಳಿತ ಮಂಡಳಿಯ ಅಧ್ಯಕ್ಷೆ ಕಾಳಿಮಾಡ ಬಿ. ರಶಿಕ ಕಾವೇರಪ್ಪ ಧ್ವಜಾರೋಹಣ ವನ್ನು ನೆರವೇರಿಸಿದರು. ರಾಷ್ಟçಗೀತೆ ಯನ್ನು ಹಾಡುವುದರ ಮೂಲಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕುಪ್ಪಣಮಾಡ ನಂಜಮ್ಮ ದೇವಯ್ಯ (ಬೇಬಿ) ಅವರು ಶಾಲೆಯ ವಿದ್ಯಾರ್ಥಿ ಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಕಾಯಪಂಡ ಎಂ. ಸುನಿಲ್ ಮಾಚಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕುಪ್ಪಣಮಾಡ ನಂಜಮ್ಮ ದೇವಯ್ಯ (ಬೇಬಿ) ಅವರು ಕ್ರೀಡೋತ್ಸವ ಉದ್ದೇಶಿಸಿ ಮಾತನಾಡಿ, ಪಾಠದ ಜೊತೆ ಆಟವಿದ್ದರೆ ಮಾತ್ರ ಮಕ್ಕಳು ಚುರುಕಾಗುತ್ತಾರೆ ಎಂದರು. ವಿದ್ಯಾರ್ಥಿಗಳಿಂದ ಕವಾಯತು ನೆರವೇರಿತು. ಶಾಲೆಯ ಹಾಗೂ ನೆರೆ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಸಾರ್ವಜನಿಕರಿಗೆ ಪಾಯ್ಸನ್ ಬಾಲ್, ಶಾಟ್ ಫುಟ್, ಹಗ್ಗ ಜಗ್ಗಾಟ, ಸ್ಲೋಬೈಕ್ ರೇಸ್ ಹಾಗೂ ಓಟ ಇನ್ನಿತರ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು.

ಕರ್ತಮಾಡ ಎನ್. ಪೊನ್ನಪ್ಪ ಇವರಿಂದ ತಮ್ಮ ಪುತ್ರ ದಿ. ಸೋಮಣ್ಣ ಅವರ ಜ್ಞಾಪಕಾರ್ಥವಾಗಿ ಮಧ್ಯಾಹ್ನ ಸಾಮೂಹಿಕ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಅಧ್ಯಕ್ಷ ಕಾಳಿಮಾಡ ಬಿ.ರಶಿಕ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸ ಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಕಾಯಪಂಡ ಎಂ. ಕಿಶೋರ್ ಅವರು ಸಭೆಯಲ್ಲಿ ನೆರೆದಿದ್ದ ಸರ್ವರನ್ನು ಸ್ವಾಗತಿಸಿದರು. ಸಭೆಯಲ್ಲಿ ನೆರೆದಿದ್ದ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಾಪಕ ಕಾರ್ಯದರ್ಶಿಗಳಾದ ಲೀನಾ ಕೆ.ಯು. ಅವರು ಪ್ರಸಕ್ತ ಸಾಲಿನ ಶಾಲಾ ವರದಿ ವಾಚನ ಮಾಡಿದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಳಿಮಾಡ ಎ. ಮುತ್ತಣ್ಣ ಅವರು ಮಾತನಾಡಿ, ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಈ ಭಾಗದ ವಿದ್ಯಾರ್ಥಿಗಳು ದೂರದ ಊರುಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿಯ ಸಂದರ್ಭದಲ್ಲಿ ದೇವಾಲಯದಂತಿರುವ ಈ ಶಾಲೆಯನ್ನು ಸ್ಥಾಪಿಸಿದ್ದು, ಈ ವಿದ್ಯಾ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಬ್ದಾರಿ ನಮ್ಮ ಮೇಲಿದೆ. ಈ ಶಾಲೆಯ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ನಾವೆಲ್ಲರೂ ಸೇರಿ ಮತ್ತಷ್ಟು ಪ್ರಯತ್ನಿಸೋಣ ಎಂದರು. ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಆಗಮಿಸಿದ್ದ ಪ್ರಮುಖರಾದ ಬೊಳ್ಳೇರ ಕೆ. ಪೊನ್ನಪ್ಪ ಅವರು ಈ ಶಾಲೆಯ ಹಿನ್ನೆಲೆಯನ್ನು ನೆನಪಿಸಿಕೊಂಡು, ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳಿಗೆ ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಬಾಲಕಿಯರ ವಸತಿ ನಿಲಯ ಸ್ಥಾಪಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಈ ಹಿಂದೆ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ಇತ್ತರು.

ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಕಾಯಪಂಡ ಎಂ. ಸುನಿಲ್ ಮಾಚಯ್ಯ, ಗೌರವ ಕಾರ್ಯದರ್ಶಿಗಳಾದ ಕುಪ್ಪಣಮಾಡ ನಂಜಮ್ಮ ದೇವಯ್ಯ(ಬೇಬಿ) ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ೨೦೨೨-೨೩ನೇ ಸಾಲಿನಲ್ಲಿ ೮, ೯ ಮತ್ತು ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪಠ್ಯ ಮತ್ತು ಪಕ್ಷೇತರ ಚಟುವಟಿಕೆಗಳಿಗೆ ಸಂಬAಧಿಸಿದAತೆ ದತ್ತಿ ನಿಧಿ ಹಾಗೂ ಇತರ ಪ್ರೋತ್ಸಾಹಕರ ಬಹುಮಾನ ಗಳನ್ನು ನೀಡಿ ಪುರಸ್ಕರಿಸಲಾಯಿತು.

ಶಿಕ್ಷಕ ನಾಗರಾಜ್ ಸಭೆಯಲ್ಲಿ ನೆರೆದಿದ್ದ ಸರ್ವರನ್ನು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ಅತ್ಯುತ್ತಮವಾಗಿ ಜರುಗಿದವು.