ಮೈತ್ರಿ ಕೂಟದ ಪರ ಪ್ರಧಾನಿ ಅಭ್ಯರ್ಥಿಯಾಗಲು ಖರ್ಗೆ ಹೆಸರು ಪ್ರಸ್ತಾಪ

ನವದೆಹಲಿ, ಡಿ. ೧೯: ರಾಷ್ಟಿçÃಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಸಲಹೆಯಿತ್ತಿದ್ದಾರೆ. ಇಂದು ರಾಷ್ಟç ರಾಜಧಾನಿ ದೆಹಲಿಯಲ್ಲಿ ನಡೆದ ಇಂಡಿಯಾ (I.ಓ.ಆ.I.ಂ) ಮೈತ್ರಿಕೂಟದ ನಾಲ್ಕನೇ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂಬ ಪ್ರಸ್ತಾಪ ಮಾಡಿದರು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈ ಪ್ರಸ್ತಾಪಕ್ಕೆ ಬೆಂಬಲ ನೀಡಿದರು. ಮಮತಾ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ ಅವರು, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಗೆದ್ದ ನಂತರ ಪ್ರಧಾನಿ ಬಗ್ಗೆ ನಿರ್ಧಾರ ಮಾಡೋಣ ಎಂದು ಹೇಳಿರುವುದಾಗಿ ವರದಿಯಾಗಿದೆ. ಲೋಕಸಭೆ ಚುನಾವಣೆ ಮುಗಿಯುವವರೆಗೆ ಇಂಡಿಯಾ ಮೈತ್ರಿಕೂಟ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಎಂದು ನಿನ್ನೆಯಷ್ಟೇ ಹೇಳಿದ್ದ ಮಮತಾ ಬ್ಯಾನರ್ಜಿ, ಇಂದು ಆ ಸ್ಥಾನಕ್ಕೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇನ್ನು ಇಂಡಿಯಾ ಮೈತ್ರಿಕೂಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, ಇಂಡಿಯಾ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ನಮಗೆ ಮೊದಲು ಸಂಸದರು ಗೆಲ್ಲುವುದು ಮುಖ್ಯ. ಸಂಸದರು ಗೆದ್ದು ಬಂದ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬಹುದು ಎಂಬುದರ ಕುರಿತು ಚರ್ಚಿಸುತ್ತೇವೆ. ಮೊದಲು ಮೈತ್ರಿಕೂಟದ ಸಂಸದರು ಗೆದ್ದು ಬರಲಿ. ಆಮೇಲೆ ನೋಡೋಣ ಎಂದರು. ಸಭೆಯಲ್ಲಿ ಪ್ರತಿಪಕ್ಷಗಳ ಸಂಸದರ ಅಮಾನತ್ತನ್ನು ತೀವ್ರವಾಗಿ ಖಂಡಿಸಲಾಯಿತು ಮತ್ತು ಅಮಾನತ್ತು ಖಂಡಿಸಿ ತಾ. ೨೨ ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಖರ್ಗೆ ತಿಳಿಸಿದರು.

ಪ್ರಧಾನಿ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಡಿ. ೧೯: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ರೂ. ೧೮,೧೭೭ ಕೋಟಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ ರೂ. ೪,೬೬೩ ಕೋಟಿ ಇನ್‌ಪುಟ್ ಸಬ್ಸಿಡಿ, ರೂ. ೧೨,೫೭೭ ಕೋಟಿ ತುರ್ತು ಪರಿಹಾರ, ರೂ. ೫೬೬ ಕೋಟಿ ಕುಡಿಯುವ ನೀರಿಗಾಗಿ ಹಾಗೂ ರೂ. ೩೬೩ ಕೋಟಿ ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ ೨೩೬ ತಾಲೂಕುಗಳ ಪೈಕಿ ೨೨೩ ತಾಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ ೧೯೬ ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ ೪೮.೧೯ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್.ಡಿ.ಆರ್.ಎಫ್.ನಿಂದ ರೂ. ೪,೬೬೩ ಕೋಟಿ ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು ೧೦೦ ರಿಂದ ೧೫೦ ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು ೩ ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಮನವಿಯನ್ನು ಮಾಡಿದ್ದೇವೆ. ಈವರೆಗೆ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ. ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿಯರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೋವಿಡ್ ಪ್ರಕರಣಗಳ ಹೆಚ್ಚಳ; ಇಂದು ಕೇಂದ್ರ ಆರೋಗ್ಯ ಸಚಿವರಿಂದ ಪರಿಶೀಲನಾ ಸಭೆ

ನವದೆಹಲಿ, ಡಿ. ೧೯: ದೇಶದಲ್ಲಿ ಕೋವಿಡ್-೧೯ ಪ್ರಕರಣಗಳ ಹೆಚ್ಚಳದ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಾ. ೨೦ ರಂದು ಆರೋಗ್ಯ ಸೌಲಭ್ಯಗಳು ಮತ್ತು ಸೇವೆಗಳ ಪರಿಶೀಲನಾ ಸಿದ್ಧತೆ ಸಭೆಯನ್ನು ನಡೆಸಲಿದ್ದಾರೆ. ಮನ್ಸುಖ್ ಮಾಂಡವಿಯಾ ಅವರು ಆರೋಗ್ಯ ಸಚಿವರು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು (ಆರೋಗ್ಯ) ಮತ್ತು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ವಾಸ್ತವಿಕವಾಗಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿತ್ಯ ೩೧೨೮ ಕ್ಯೂಸೆಕ್ ನೀರು ಹರಿಸುವಂತೆ ಆದೇಶ

ನವದೆಹಲಿ, ಡಿ. ೧೯: ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ ೩೧೨೮ ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ ೧೦೩೦ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಆವರಿಸಿದೆ. ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಆದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ವಿಧಾನಸಭೆಯಿಂದ ನೆಹರು ಭಾವಚಿತ್ರ ತೆಗೆದ ಬಿಜೆಪಿ ಸರ್ಕಾರ

ಭೋಪಾಲ್, ಡಿ. ೧೯: ಮಧ್ಯಪ್ರದೇಶ ನೂತನ ಬಿಜೆಪಿ ಸರ್ಕಾರ ವಿಧಾನಸಭೆಯಿಂದ ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ತೆಗೆದುಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಜೈವರ್ಧನ್ ಸಿಂಗ್ ಅವರು, ಬಿಜೆಪಿ ಅಥವಾ ಯಾರೇ ಫೋಟೋ ತೆಗೆದರೂ ಅದು ತಪ್ಪು. ಈ ಬಗ್ಗೆ ಹಂಗಾಮಿ ಸ್ಪೀಕರ್ ಗೋಪಾಲ್ ಭಾರ್ಗವ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಸದನದಿಂದ ಜವಾಹರಲಾಲ್ ನೆಹರು ಫೋಟೋ ತೆಗೆದಿರುವುದು ವಿಷಾದನೀಯ ಎಂದಿರುವ ಕಾಂಗ್ರೆಸ್ ನಾಯಕ, ಒಂದಾಗಿದ್ದ ಭಾರತ ಮತ್ತು ಪಾಕಿಸ್ತಾನಕ್ಕೆ ಒಟ್ಟಿಗೆ ಸ್ವಾತಂತ್ರ‍್ಯ ಸಿಕ್ಕಿದೆ. ಆದರೆ ಪಾಕಿಸ್ತಾನದ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಜವಾಹರಲಾಲ್ ನೆಹರು ಅವರಿಂದಾಗಿ ಭಾರತದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಯಾಗಿದೆ. ಬಿಜೆಪಿ ಅಥವಾ ಬೇರೆ ಯಾರೇ ನೆಹರು ಫೋಟೋ ತೆಗೆದರೂ ಅದು ತಪ್ಪಾಗುತ್ತದೆ. ನಾನು ಹಂಗಾಮಿ ಸ್ಪೀಕರ್ ಜೊತೆ ಚರ್ಚಿಸುತ್ತೇನೆ ಎಂದು ಜೈವರ್ಧನ್ ಸಿಂಗ್ ತಿಳಿಸಿದ್ದಾರೆ.

ಜಿಎಸ್‌ಟಿ ತಿದ್ದುಪಡಿ ಮಸೂದೆ ಅಂಗೀಕಾರ

ನವದೆಹಲಿ, ಡಿ. ೧೯: ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯರ ವಯೋಮಿತಿಯನ್ನು ಹೆಚ್ಚಿಸಲು ಅವಕಾಶ ನೀಡುವ ‘ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ (ಎರಡನೆಯ ತಿದ್ದುಪಡಿ) ಮಸೂದೆ ೨೦೨೩'ಕ್ಕೆ ಲೋಕಸಭೆಯು ಮಂಗಳವಾರ ಅಂಗೀಕಾರ ನೀಡಿದೆ. ಜಿಎಸ್‌ಟಿ ನೋಟೀಸ್ ಪ್ರಶ್ನಿಸಿ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ಗಳಲ್ಲಿ ಅರ್ಜಿ ಸಲ್ಲಿಸಿರುವವರು, ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯ ಆರಂಭಿಸಿದ ನಂತರದಲ್ಲಿ, ತಮ್ಮ ಅರ್ಜಿಗಳನ್ನು ಸ್ವಇಚ್ಛೆಯಿಂದ ಮೇಲ್ಮನವಿ ನ್ಯಾಯಮಂಡಳಿಗಳ ಎದುರು ತರುವ ಅವಕಾಶ ಇರುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು. ಮಸೂದೆಯು ಅಧ್ಯಕ್ಷರ ವಯೋಮಿತಿಯನ್ನು ಈಗಿರುವ ೬೭ ವರ್ಷದಿಂದ ೭೦ ವರ್ಷಕ್ಕೆ, ಸದಸ್ಯರ ವಯೋಮಿತಿಯನ್ನು ಈಗಿನ ೬೫ ವರ್ಷದಿಂದ ೬೭ ವರ್ಷಕ್ಕೆ ಹೆಚ್ಚು ಮಾಡಲು ಅವಕಾಶ ನೀಡುತ್ತದೆ.