ಸುಂಟಿಕೊಪ್ಪ, ಡಿ. ೧೯: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ದೊಡ್ಡ ಗಾತ್ರದ ಮರದ ಕೊಂಬೆ ಮೈ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಕಾರ್ಮಿಕ ಮಹಿಳೆಯೊಬ್ಬರು ಅಸುನೀಗಿರುವ ಘಟನೆ ವರದಿಯಾಗಿದೆ.

ಸುಂಟಿಕೊಪ್ಪ ಸಮೀಪದ ಡಿ. ಪನ್ಯ ತೋಟದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ. ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಎಂಬವರ ಪತ್ನಿ ಲಕ್ಷಿö್ಮ (೪೬) ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಕ್ಷಿö್ಮ ಅವರು ಸಹಕಾರ್ಮಿಕರೊಂದಿಗೆ ಎಂದಿನAತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆಯೊAದು ಇವರ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಲಕ್ಷಿö್ಮ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಆರಂಭಿಕ ಚಿಕಿತ್ಸೆ ಕೊಡಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅದಾಗಲೇ ಲಕ್ಷಿö್ಮ ಅವರು ಉಸಿರು ಚೆಲ್ಲಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಸುಂಟಿಕೊಪ್ಪ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.