ಮಡಿಕೇರಿ, ಡಿ. ೨೦: ರಾಜಾಸೀಟ್ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ನಗರದ ರಾಜಾಸೀಟ್ ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ ‘ಫಲಪುಷ್ಪ ಪ್ರದರ್ಶನ’ವನ್ನು ಜನವರಿ ೨೬ ರಿಂದ ಮೂರು ದಿನಗಳ ಕಾಲ ಆಯೋಜಿಸಲು ತೀರ್ಮಾನಿಸಲಾಯಿತು.
ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತೀ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮತ್ತಿತರ ಸಂಬAಧ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ರಾಜಾಸೀಟ್ ಮಾರ್ಗದ ರಸ್ತೆಯನ್ನು ಸರಿಪಡಿಸಬೇಕು. ಉದ್ಯಾನವನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನೀರು ಪೂರೈಕೆ ಮತ್ತು ಲೈಟಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಉದ್ಯಾನವನದ ಫೌಂಟೇನ್ನ್ನು (ಕಾರಂಜಿ) ಉತ್ತಮವಾಗಿ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ನಿರ್ವಹಣೆ ಮಾಡುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಸೂಚಿಸಿದರು. ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬAಧ ಜಿಲ್ಲೆಯ ಕಲೆ, ಸಂಸ್ಕೃತಿ, ಪರಿಸರ ಮತ್ತಿತರ ವಿಷಯಗಳ ಕುರಿತು ಹಲವು ಮಾಹಿತಿ ನೀಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್. ಯೋಗೇಶ್ ಮನವಿ ಮಾಡಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ರಾಜಾಸೀಟ್ ಮುಂಭಾಗದಲ್ಲಿ ರಸ್ತೆ ಬದಿ ರೈಲಿಂಗ್ಸ್ ನಿರ್ಮಾಣ ಮಾಡುವುದು ಅತ್ಯಗತ್ಯ, ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳ ಸಂಬAಧ ‘ಮಾಹಿತಿ ಫಲಕ’ ಅಳವಡಿಸುವುದು ಅಗತ್ಯ ಎಂದು ಅನಿತಾ ಭಾಸ್ಕರ್ ಪ್ರಸ್ತಾಪಿಸಿದರು.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸಿದ್ದೇಗೌಡ, ಕೆಆರ್ಐಡಿಎಲ್ ಕಾರ್ಯಪಾಲಕ ಇಂಜಿನಿಯರ್ ಸುರೇಶ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ನಗರಸಭೆಯ ಪರಿಸರ ಇಂಜಿನಿಯರ್ ಸೌಮ್ಯ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.