ಮಡಿಕೇರಿ, ಡಿ. ೧೯: ಮಡಿಕೇರಿ ಕೊಡವ ಸಮಾಜದ ವತಿಯಿಂದ ಪುತ್ತರಿ ಊರೊರ್ಮೆ ಕಾರ್ಯಕ್ರಮ ತಾ. ೨೪ ರಂದು ಜರುಗಲಿದೆ. ಬೆಳಿಗ್ಗೆ ೧೧ ಗಂಟೆಗೆ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರು ವಹಿಸಲಿದ್ದಾರೆ.
ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ಗೌಡ ಹಾಗೂ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರುಗಳು ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ ೨.೩೦ ಗಂಟೆಗೆ ಸಮಾಜದಿಂದ ಮೆರವಣಿಗೆ ಮೂಲಕ ಕೋಲ್ಮಂದ್ಗೆ ತೆರಳಿ ಅಲ್ಲಿ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್ನಂತಹ ಸಾಂಸ್ಕೃತಿಕ ಪ್ರದರ್ಶನ ಜರುಗಲಿದೆ.