(ಕೆ.ಎಂ ಇಸ್ಮಾಯಿಲ್ ಕಂಡಕರೆ)

ಮಡಿಕೇರಿ, ಡಿ. ೨೦: ಕೊಡಗು ಜಿಲ್ಲೆ ಹೊರತುಪಡಿಸಿ ಡಿಸೆಂಬರ್ ೧೯ ರಂದು ರಾಜ್ಯದ ೩೦ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮತ್ತು ೨೩೪ ತಾಲೂಕು ಪಂಚಾಯತ್‌ಗಳ ಸದಸ್ಯರ ಸಂಖ್ಯೆ, ವರ್ಗವಾರು ಮೀಸಲು ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಒಂದು ವಾರದೊಳಗೆ ಕೊಡಗು ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡಣೆಯ ಅಧಿಸೂಚನೆ ಪ್ರಕಟಿಸಿ, ಇದಾದ ನಂತರ ೭ ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಿ, ೧೦ ದಿನಗಳ ಕಾಲ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ರಾಜ್ಯದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೈಕೋರ್ಟ್ಗೆ ಮಂಗಳವಾರ ಮಾಹಿತಿ ನೀಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರವು ಅವಧಿ ಮುಗಿದ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ತೀರ್ಮಾನ ಮಾಡಲು ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ರಚಿಸಲಾಗಿತ್ತು.

ಬಿಜೆಪಿ ಸರ್ಕಾರ ಅವಧಿಯಲ್ಲಿ ೨೦೨೩ ಜನವರಿ ತಿಂಗಳಲ್ಲಿ ಸೀಮಾ ನಿರ್ಣಯ ಆಯೋಗವು ಕ್ಷೇತ್ರಗಳ ಪುನರ್ವಿಂಗಡಣೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ವರ್ಷ ಜನವರಿ ತಿಂಗಳಲ್ಲಿ ಪ್ರಕಟಗೊಂಡಿದ್ದ ಕ್ಷೇತ್ರಗಳ ಪುನರ್ವಿಂಗಡಣೆಗೆ ದೊಡ್ಡ ಆಕ್ಷೇಪ ಕೂಡ ವ್ಯಕ್ತವಾಗಿತ್ತು. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷಿö್ಮÃನಾರಾಯಣ ಆಯೋಗವು ಪ್ರಕಟಿಸಿದ್ದ ಕರಡುಪಟ್ಟಿಯನ್ನು ಬದಲಾಯಿಸಿ ಕಾಂಗ್ರೆಸ್ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಎಂ.ಆರ್ ಕಾಂಬ್ಳೆ ನೇತೃತ್ವದಲ್ಲಿ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ರಚಿಸಿತ್ತು. ೨೦೨೩ ಸೆಪ್ಟೆಂಬರ್ ೦೫ ರಂದು ಪ್ರಕಟಗೊಂಡಿದ್ದ ಕರಡು ಪಟ್ಟಿಯಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಯಾಗದೆ ಜಿಲ್ಲೆಯ ಜನತೆಗೆ ನಿರಾಸೆಯುಂಟಾಗಿತ್ತು. ಒಟ್ಟು ೨೯ ಕ್ಷೇತ್ರಗಳಿದ್ದ ಕೊಡಗಿನಲ್ಲಿ ಜನವರಿ ತಿಂಗಳಲ್ಲಿ ಪ್ರಕಟಗೊಂಡ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡಣೆಯಲ್ಲಿ ೨೫ ಕ್ಷೇತ್ರಕ್ಕೆ ಇಳಿಸಲಾಗಿತ್ತು.

ನಾಲ್ಕು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಕಡಿತಗೊಳಿಸಲಾಗಿತ್ತು. ಸೆಪ್ಟೆಂಬರ್ ತಿಂಗಳ ೫ ರಂದು ಪ್ರಕಟಗೊಂಡಿದ್ದ ಕ್ಷೇತ್ರಗಳ ಪುನರ್ವಿಂಗಡಣೆಗೆ ಪಟ್ಟಿಯಲ್ಲಿ ಮತ್ತೆ ೨೫ ಜಿಲ್ಲಾ ಪಂಚಾಯತ್ ಏಕಸದಸ್ಯ ಕ್ಷೇತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಜನವರಿ ತಿಂಗಳಲ್ಲಿ ಪ್ರಕಟಗೊಂಡಿದ್ದ ಸೀಮಾ ನಿರ್ಣಯ ಆಯೋಗದಲ್ಲಿ ಕೊಡಗು ಜಿಲ್ಲೆಯ ೨೦೧೬ರ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿದ್ದ ಕ್ಷೇತ್ರಗಳ ಹೆಸರು ಹಾಗೂ ಪಂಚಾಯತ್‌ಗಳು ಅದಲು-ಬದಲಾಗಿತ್ತು. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಬಹುತೇಕ ೨೦೧೬ ರಲ್ಲಿ ಇದ್ದ ಕ್ಷೇತ್ರಗಳ ಮಾದರಿಯಲ್ಲಿಯೇ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕೆಲವೊಂದು ಕ್ಷೇತ್ರಗಳನ್ನು ಪುನರ್ವಿಂಗಡಿಸುವಾಗ ಎಡವಟ್ಟುವುಂಟಾಗಿದ್ದು, ಕ್ಷೇತ್ರಕ್ಕೆ ಹತ್ತಿರವಲ್ಲದ ಗ್ರಾಮಪಂಚಾಯಿಗಳನ್ನು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಸೇರಿಸಲಾಗಿತ್ತು.

ಸೆಪ್ಟೆಂಬರ್ ೧೯ ಸಂಜೆ ೫ ಗಂಟೆಯವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದಕ್ಕೆ ಜಿಲ್ಲೆಯ ಜನರ ಮಧ್ಯೆ ದೊಡ್ಡ ಆಕ್ಷೇಪ ಕೂಡ ವ್ಯಕ್ತವಾಗಿತ್ತು.

ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗವು ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಗೆ ಪುನಃ ೨೯ ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ನೀಡಿ, ವಿಶೇಷವಾಗಿ ಪರಿಗಣಿಸಬೇಕೆಂದು ಮನವಿ ಸಲ್ಲಿಸಿದ್ದರು.

ಅಧಿವೇಶನದಲ್ಲಿ ಗಮನಸೆಳೆದಿದ್ದ ಕೊಡಗಿನ ಶಾಸಕದ್ವಯರು

ಬೆಳಗಾವಿಯಲ್ಲಿ ಕಳೆದ ವಾರ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಕೊಡಗಿನ ಶಾಸಕದ್ವಯರಾದ ಎ.ಎಸ್ ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡ ಅವರು, ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ೨೯ ರಿಂದ ೨೫ ಕ್ಕೆ ಇಳಿಸಿರುವುದಕ್ಕೆ ಸದನದಲ್ಲಿ ಪ್ರಸ್ತಾಪಿಸಿದ್ದರು.

ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ೨೯ ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಇತ್ತು. ಇದೀಗ ೨೫ಕ್ಕೆ ಇಳಿಸಲಾಗಿದೆ. ೧೮ ಸಾವಿರದ ಬದಲು ೧೭ ಸಾವಿರಕ್ಕೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಎಂದು ಕೊಡಗು ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ, ೨೯ ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಮರಳಿ ಸ್ಥಾಪನೆ ಮಾಡಬೇಕೆಂದು ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡ ಅವರು ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದರು.

ಕೊಡಗಿನ ಶಾಸಕದ್ವಯರ ಪ್ರಸ್ತಾಪಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಪೂರಕವಾಗಿ ಸ್ಪಂದಿಸಿದ್ದರು. ಇದೀಗ ಜಿಲ್ಲೆಯ ಶಾಸಕದ್ವಯರ ಪ್ರಯತ್ನ ಫಲವಾಗಿ, ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ವಿಶೇಷವಾಗಿ ಪರಿಗಣಿಸಿದೆ. ಚಳಿಗಾಲದ ಅಧಿವೇಶನದಲ್ಲಿ ೨೦೨೩ನೇ ಸಾಲಿನ ಕರ್ನಾಣಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕವನ್ನು, ಸದನದಲ್ಲಿ ತಿದ್ದುಪಡಿತರಲಾಗಿತ್ತು. ಕೊಡಗು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ಹಾಗೂ ವರ್ಗವಾರು ಮೀಸಲು ಸಂಖ್ಯೆಯನ್ನು ಪ್ರಕಟಿಸಿದೆ.

ಒಂದು ವಾರದೊಳಗೆ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ಅಧಿಸೂಚನೆ ಪ್ರಕಟವಾಗಲಿದೆ. ಜಿಲ್ಲೆಯಲ್ಲಿ ಬಹುತೇಕ ಹಳೆಯ ಮಾದರಿಯಂತೆ ೨೯ ಜಿಲ್ಲಾ ಪಂಚಾಯತ್ ಸ್ಥಾನಗಳು ಪ್ರಕಟವಾಗುವುದು ನಿಚ್ಚಲವಾಗಿದೆ.

೧೮ ಸಾವಿರ ಜನಸಂಖ್ಯೆಯಿAದ ೨೧ ಸಾವಿರಕ್ಕೆ ಹೆಚ್ಚಳ ಮಾಡಲಾಗಿತ್ತು

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ೧೯೯೩ರ ಅಧಿನಿಯಮ ೧೬೦, ೧೬೧ ಮತ್ತು ೧೬೨ ರಲ್ಲಿ ಸ್ಪಷ್ಟವಾಗಿ ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ೩೦ ಸಾವಿರ ಜನಸಂಖ್ಯೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಗೆ ೧೮ ಸಾವಿರ ಜನಸಂಖ್ಯೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಎಂದು ನಿಗದಿ ಮಾಡಲಾಗಿತ್ತು. ಜನಸಂಖ್ಯೆ ನೆಪದಲ್ಲಿ ಪ್ರತ್ಯೇಕ ಲೋಕಸಭಾ ಕ್ಷೇತ್ರದಿಂದ ಕೊಡಗು ಜಿಲ್ಲೆ ವಂಚಿತಗೊAಡಿದೆ.

ಮೂರು ಸ್ಥಾನವಿದ್ದ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಎರಡಕ್ಕಿಳಿದೆ. ನಂತರ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡಣೆಯಲ್ಲಿ ಕೂಡ ಕೊಡಗಿಗೆ ಅನ್ಯಾಯವಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚಿಸಲಾಗಿದ್ದ ಪಂಚಾಯತ್‌ರಾಜ್ ಸೀಮಾ ಗಡಿ ನಿರ್ಣಯ ಆಯೋಗವು ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ೩೦ ಸಾವಿರ ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರದ ಸಂಖ್ಯೆಯನ್ನು ೨೩ ಸಾವಿರಕ್ಕೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಎಂದು ನಿಗದಿಪಡಿಸಿದ್ದರು.

ಆದರೆ ೧೮ ಸಾವಿರ ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಎಂದು ನಿಗದಿಪಡಿಸಿದ್ದ ಕೊಡಗಿನಲ್ಲಿ ೨೩ ಸಾವಿರ ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರ ಎಂದು ೨೯ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿದ್ದ ಕೊಡಗಿನಲ್ಲಿ ೨೫ ಕ್ಕೆ ಇಳಿಸಿ ಜಿಲ್ಲೆಗೆ ಅನ್ಯಾಯ ಮಾಡಲಾಗಿತ್ತು.

ಇದೀಗ ಚಳಿಗಾಲದ ಅಧಿವೇಶನದಲ್ಲಿ ಈ ಹಿಂದೆ ಬಿಜೆಪಿ ತಂದಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಜಿಲ್ಲೆಯಲ್ಲಿ ೧೮ ಸಾವಿರದ ಬದಲು ೧೭ ಸಾವಿರ ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಸಂಖ್ಯೆ ನಿಗದಿಯಾಗಲಿದೆ. ಒಂದು ವಾರದಲ್ಲಿ ಕೊಡಗು ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಮಹಿಳೆಯರಿಗೆ ಶೇಕಡಾ ೫೦ ರಷ್ಟು ಮೀಸಲು!

ಆಯಾ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಒಟ್ಟು ಸದಸ್ಯರ ಸಂಖ್ಯೆಯಲ್ಲಿ ಶೇಕಡಾ ೫೦ರಷ್ಟನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಈ ರೀತಿ ಮೀಸಲಿಟ್ಟ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಅ ಮತ್ತು ಬ ವರ್ಗ ಹಾಗೂ ಸಾಮಾನ್ಯ ಮಹಿಳೆಯರಿಗೆ ಮೀಸಲಿಡಲಾಗಿದೆ.