ಸೋಮವಾರಪೇಟೆ, ಡಿ. ೧೯: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಕೆಗಾಗಿ ಗರಿಷ್ಠ ೫ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಮಂಜುನಾಥ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ೨ ಹೆಕ್ಟೇರ್ ಪ್ರದೇಶದವರೆಗೆ ಶೇ.೯೦ರ ಸಹಾಯಧನ ಮತ್ತು ಇತರೆ ರೈತರಿಗೆ ಶೇ. ೭೫ ರ ಸಹಾಯಧನ ದೊರೆಯಲಿದೆ. ೨ ಹೆಕ್ಟೇರ್ನಿಂದ ೫ ಹೆಕ್ಟೇರ್ ಪ್ರದೇಶದವರೆಗೆ ಶೇ. ೪೫ರ ಸಹಾಯಧನ ನೀಡಲಾಗುತ್ತದೆ.
ರಾಷ್ಟಿçÃಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ಇಲಾಖಾ ಪಾಲುದಾರಿಕೆ ಕಂಪೆನಿ ಯಾದ ಪತಂಜಲಿ ಫುಡ್ಸ್ರವರೊಂದಿಗೆ ಪಿಪಿಪಿ (PPP) ಮಾದರಿಯಲ್ಲಿ ಅನುಷ್ಠಾನಗೊಳಿಸ ಲಾಗುತ್ತಿದ್ದು, ತಾಳೆ ಹೊಸ ಪ್ರದೇಶ ವಿಸ್ತರಣೆಗೆ ರೂ. ೨೦ ಸಾವಿರ ಸಹಾಯಧನ ಹಾಗೂ ಮೊದಲ ನಾಲ್ಕು ವರ್ಷದ ಪಾಲನೆಗಾಗಿ ರೂ. ೫೫೦೦ ರಂತೆ ಪ್ರತಿ ಹೆಕ್ಟೇರ್ಗೆ ನೀಡಲಾಗುವುದು. ಇದರ ಜೊತೆಗೆ ತಾಳೆಯಲ್ಲಿ ಡಿಸೇಲ್ ಪಂಪ್ಸೆಟ್ ಖರೀದಿಗೆ, ಕಟಾವು ಯಂತ್ರ ಖರೀದಿಗೆ ಸಹಾಯಧನ ನೀಡಲಾಗುತ್ತದೆ.
ಆಸಕ್ತ ರೈತರು ನಿಗದಿತ ಅರ್ಜಿ ನಮೂನೆ, ಪಹಣಿ, ಆಧಾರ್ ಕಾರ್ಡ್ ಹಾಗೂ ಮತ್ತಿತರ ದಾಖಲಾತಿ ಗಳೊಂದಿಗೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಹೆಸರನ್ನು ನೋಂದಾ ಯಿಸಿಕೊಳ್ಳಬೇಕು. ಸಹಾಯಧನವನ್ನು ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರು, ಮಹಿಳೆಯರು, ಅಂಗ ವಿಕಲರಿಗೆ ಆದ್ಯತೆ ನೀಡಲಾಗುವುದು ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ.