*ಸಿದ್ದಾಪುರ, ಡಿ. ೧೯: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಯುವ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ವಿವಿಧೆಡೆ ಸಿಹಿ ಹಂಚಿ ಸಂಭ್ರಮಿಸಿದರು.
ನೆಲ್ಲಿಹುದಿಕೇರಿ ಬೆಟ್ಟದಕಾಡು ಸರಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು, ಚೆಸ್ಕಾಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಅಂಚೆ ಕಚೇರಿಯ ನೌಕರರಿಗೆ ಸಿಹಿ ಹಂಚಲಾಯಿತು.
ಈ ಸಂದರ್ಭ ಜೆಡಿಎಸ್ ಜಿಲ್ಲಾ ಯುವ ಸಂಘಟನಾ ಕಾರ್ಯದರ್ಶಿ ಶರತ್, ನೆಲ್ಲಿಹುದಿಕೇರಿ ಯುವ ಘಟಕದ ಅಧ್ಯಕ್ಷ ಶಿಯಾಬ್ ವಿಪಿಎಸ್ ಹಾಗೂ ಕಾರ್ಯಕರ್ತರು ಹಾಜರಿದ್ದರು.