ಮಡಿಕೇರಿ, ಡಿ. ೧೯: ಓಮಿಕ್ರಾನ್ ರೂಪಾಂತರಿ ‘ಜೆಎನ್-೧’ ವೈರಸ್ ಪ್ರಕರಣಗಳು ದೇಶದ ಕೆಲವೆಡೆ ಪತ್ತೆಯಾಗುತ್ತಿರುವ ಹಿನ್ನೆಲೆ ಕೆಲವೊಂದು ಸಲಹೆಗಳನ್ನು ಕೋವಿಡ್ ೧೯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿದೆ.

ದೇಶದ ಕೋವಿಡ್ ೧೯ನ ಅಂಕಿ-ಅAಶಗಳು, ಕೇರಳ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ‘ಜೆಎನ್-೧’ ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್‌ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿ ಕೊಂಡು, ಕೋವಿಡ್ ೧೯ ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೆಲವೊಂದು ಸಲಹೆ ಪಾಲನೆಗೆ ಶಿಫಾರಸ್ಸು ಮಾಡಿದೆ.

¨ ಎಲ್ಲಾ ಹಿರಿಯ ನಾಗರಿಕರು (೬೦ ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ

(ಮೊದಲ ಪುಟದಿಂದ) ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

¨ ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

¨ ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.

¨ ಆರೋಗ್ಯ ಸಮಸ್ಯೆಗಳು ಕಂಡುಬAದಲ್ಲಿ ಮನೆಯ ಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು / ದುರ್ಬಲರನ್ನು (vuಟಟಿeಡಿಚಿbಟe) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭ ದಲ್ಲಿ ಮಾಸ್ಕ್ ಧರಿಸಬೇಕು.

¨ ಅಂತರರಾಷ್ಟಿçÃಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆ ಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಜಿಲ್ಲಾಡಳಿತಕ್ಕೆ ಸೂಚನೆ:

ಭಾರತ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಅನಗತ್ಯ ಗಾಬರಿಯಿಂದ ಈಗಲೇ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊAಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಸರ್ವೇಕ್ಷಣೆಯನ್ನು ಹೆಚ್ಚಿಸುವುದು ಅಥವಾ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿರುವುದಿಲ್ಲ. ಅದಾಗ್ಯೂ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊAಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಿ ವರದಿ ಸಲ್ಲಿಸಬೇಕು.

ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SಂಖI ಪ್ರಕರಣಗಳು ಹಾಗೂ ೨೦ IಐI ಪ್ರಕರಣಗಳ ಪೈಕಿ ೧ IಐI ಪ್ರಕರಣವನ್ನು ಕೋವಿಡ್ -೧೯ ಪರೀಕ್ಷೆಗೆ ಒಳಪಡಿಸಬೇಕು.

ಅಂತರರಾಷ್ಟಿçÃಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್ -೧೯ ಸೋಂಕಿನ ಲಕ್ಷಣಗಳನ್ನು ಹೊಂದಿರುವವರು (iಡಿಡಿesಠಿeಛಿಣive oಜಿ ಅಣ vಚಿಟue ಚಿಡಿe ಣo be seಟಿಣ ಜಿoಡಿ WಉS).

ಗುಂಪಾಗಿ ವರದಿಯಾಗುವ ಪ್ರಕರಣಗಳು / ಹೆಚ್ಚು ಪ್ರಕರಣಗಳು ಮತ್ತು ಮರಣಗಳು ವರದಿಯಾಗುವ ಫೋಕಲ್ ಔಟ್ ಬ್ರೇಕ್‌ಗಳ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು WಉS ಪರೀಕ್ಷೆಗೆ ಕಳುಹಿಸಬೇಕು.

ತೀವ್ರ ಸ್ವರೂಪದ ರೋಗ ಲಕ್ಷಣಗಳನ್ನು ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SಂಖI ಪ್ರಕರಣಗಳು ಹಾಗೂ ಸುದೀರ್ಘ ಅವಧಿಯವರೆಗೆ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣಗಳು.

ಕೋವಿಡ್ - ೧೯ನ ಮರು ಸೋಂಕಿಗೆ ಒಳಗಾದವರು.

ಕೋವಿಡ್ ೧೯ ಲಸಿಕೆಯ ಎರಡು ಡೋಸ್ ವ್ಯಾಕ್ಸಿನ್ ಪಡೆದ ನಂತರವೂ ಕೋವಿಡ್ ೧೯ನ ಸೋಂಕು ದೃಢಪಟ್ಟವರು.

ಕೋವಿಡ್ ೧೯ ಮರಣ ಪ್ರಕರಣಗಳು ಸಂಬAಧ WಉS ಪರೀಕ್ಷೆ ಕೈಗೊಳ್ಳಬೇಕು.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ ೨೫ ಕ್ಕಿಂತ ಕಡಿಮೆ ಅಣ vಚಿಟue ಇರುವ ಮಾದರಿಗಳನ್ನು (ಅಂತರರಾಷ್ಟಿçÃಯ ಪ್ರಯಾಣ ಹಿನ್ನೆಲೆಯುಳ್ಳವರನ್ನು ಹೊರತುಪಡಿಸಿ) ಃಒಅ&ಖಎ ಬೆಂಗಳೂರು, ಇಲ್ಲಿಗೆ WಉS ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯ ವಹಿಸಬೇಕು.

ಮುಂಬರುವ ದಿನಗಳಲ್ಲಿ ಕೋವಿಡ್ ೧೯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಕಾರ್ಯಾಚರಣೆ ಸಿದ್ಧತೆಯನ್ನು (ಔಠಿeಡಿಚಿಣioಟಿಚಿಟ ಡಿeಚಿಜiಟಿess) ಖಚಿತ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಒಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಂದೀಪ್ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.