ನಾಪೋಕ್ಲು, ಡಿ. ೨೧: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಡ್ಯೋಳAಡ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಮಾಡಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಲಾಂಛನ ಅನಾವರಣಗೊಳಿಸಿದ ಸಿಎಂ ಕೊಡವರ ಹಾಕಿ ನಮ್ಮೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಕ್ರೀಡಾಕೂಟದ ಉದ್ಘಾಟನೆಗೆ ಆಹ್ವಾನ ನೀಡಿದ ಕುಟುಂಬಸ್ಥರ ಆಹ್ವಾನವನ್ನು ಪರಿಗಣಿಸಿದ ಸಿದ್ದರಾಮಯ್ಯ ಅವರು ಕ್ರೀಡಾಕೂಟದ ಉದ್ಘಾಟನೆಗೆ ಬರುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಯಿತು. ಈ ಸಂದರ್ಭ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ, ಕುಂಡ್ಯೋಳAಡ ಕ್ರೀಡಾಕೂಟದ ಅಧ್ಯಕ್ಷ ರಮೇಶ್ ಮುದ್ದಯ್ಯ, ಸಂಚಾಲಕ ದಿನೇಶ್ ಕಾರ್ಯಪ್ಪ, ಕಾರ್ಯದರ್ಶಿ ಬಿಪಿನ್ ಬೆಳ್ಳಿಯಪ್ಪ, ಖÀಜಾಂಜಿ ವಿಶು ಪೂವಯ್ಯ ಹಾಗೂ ಕುಂಡ್ಯೋಳAಡ ಕುಟುಂಬ ಸದಸ್ಯರು ಹಾಜರಿದ್ದರು.