ಮುಳ್ಳೂರು, ಡಿ. ೨೧: ಬ್ಯಾಡಗೊಟ್ಟ ಗ್ರಾ.ಪಂ.ನ ೨೦೨೩-೨೪ನೇ ಸಾಲಿನ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಕಚೇರಿ ಆವರಣದಲ್ಲಿ ನಡೆಯಿತು.

ಗ್ರಾಮಸಭೆಯ ಪ್ರಾರಂಭದಲ್ಲಿ ಸಭೆಗೆ ಆರೋಗ್ಯ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಲಾಖೆಯಿಂದ ಅಭಿಯಂತರರು ಗೈರು ಹಾಜರಾಗಿದ್ದ ಹಿನ್ನೆಲೆ ಗ್ರಾಮಸ್ಥರು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವುದರಿಂದ ರೋಗಿಗಳಿಗೆ ಪ್ರಥಮ ಚಿಕಿತ್ಸೆಯು ಸಹ ಸರಿಯಾಗಿ ಸಿಗುತ್ತಿಲ್ಲ; ಈ ಬಗ್ಗೆ ಉತ್ತರಿಸಬೇಕಿದ್ದ ಆರೋಗ್ಯ ಇಲಾಖೆಗೆ ಸಂಬAಧಪಟ್ಟ ಅಧಿಕಾರಿ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಸಭೆಯಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಭೆಯ ನೋಡಲ್ ಮುಳ್ಳೂರು, ಡಿ. ೨೧: ಬ್ಯಾಡಗೊಟ್ಟ ಗ್ರಾ.ಪಂ.ನ ೨೦೨೩-೨೪ನೇ ಸಾಲಿನ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಕಚೇರಿ ಆವರಣದಲ್ಲಿ ನಡೆಯಿತು.

ಗ್ರಾಮಸಭೆಯ ಪ್ರಾರಂಭದಲ್ಲಿ ಸಭೆಗೆ ಆರೋಗ್ಯ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಲಾಖೆಯಿಂದ ಅಭಿಯಂತರರು ಗೈರು ಹಾಜರಾಗಿದ್ದ ಹಿನ್ನೆಲೆ ಗ್ರಾಮಸ್ಥರು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವುದರಿಂದ ರೋಗಿಗಳಿಗೆ ಪ್ರಥಮ ಚಿಕಿತ್ಸೆಯು ಸಹ ಸರಿಯಾಗಿ ಸಿಗುತ್ತಿಲ್ಲ; ಈ ಬಗ್ಗೆ ಉತ್ತರಿಸಬೇಕಿದ್ದ ಆರೋಗ್ಯ ಇಲಾಖೆಗೆ ಸಂಬAಧಪಟ್ಟ ಅಧಿಕಾರಿ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಸಭೆಯಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಭೆಯ ನೋಡಲ್ ಎಂದು ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಹೇಳಿದರು.

ಕಂದಾಯ ಇಲಾಖೆಯ ವಿಷಯಕ್ಕೆ ಸಂಬAಧಪಟ್ಟ ಚರ್ಚೆ ವೇಳೆ ರೈತರ ಪರವಾಗಿ ಮಾತನಾಡಿದ ಗ್ರಾ.ಪಂ. ಸದಸ್ಯ ಡಿ.ಆರ್. ವೇದÀಕುಮಾರ್ ಪಹಣಿಯಲ್ಲಿ ಬೆಳೆ ಕಾಲಂನಲ್ಲಿ ಬೆಳೆ ನಮೂದಾಗದೆ ರೈತರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಸಭೆಯ ಗಮನ ಸೆಳೆದರು, ಈ ವಿಷಯಕ್ಕೆ ಸಂಬAಧಪಟ್ಟAತೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಭಾಗದಲ್ಲಿ ರೈತರು ದೀರ್ಘಾವಧಿಯ ಬೆಳೆ ಬೆಳೆಯುವುದರಿಂದ ವಾರ್ಷಿಕವಾಗಿ ಬೆಳೆ ಸಮೀಕ್ಷೆಯ ಅವಶ್ಯಕತೆ ಇಲ್ಲದಿರುವುದರಿಂದ ಅದನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಗ್ರಾ.ಪಂ. ನಿಂದ ಪತ್ರ ಬರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಗೃಹಲಕ್ಷಿö್ಮ ಯೋಜನೆಯಲ್ಲಾಗುತ್ತಿರುವ ಸಮಸ್ಯೆ ಬಗ್ಗೆ, ಗ್ರಾ.ಪಂ.ನ ಕೆಲವು ವಾರ್ಡ್ಗಳಲ್ಲಿ ಹಗಲು ವೇಳೆ ವಿದ್ಯುತ್ ದೀಪ ಉರಿಯುತ್ತಿದ್ದು, ಇದನ್ನು ರದ್ದುಪಡಿಸುವಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಕಂದಾಯ ಇಲಾಖೆ ಪರವಾಗಿ ಗ್ರಾಮ ಆಡಳಿತ ಅಧಿಕಾರಿ ಚೈತ್ರಾ, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಮ್ಮ, ವಿದ್ಯುತ್ ಇಲಾಖೆ ಪರವಾಗಿ ಅಭಿಯಂತರ ಜೆ.ಇ. ಪ್ರಕಾಶ್, ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ಈಶ್ವರ್ ಕಲ್ಯಾಣಿ, ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಯಾದವ್ ಬಾಬು, ಪಶು ವೈದ್ಯಾಧಿಕಾರಿ ಡಾ.ಸತೀಶ್ ಮುಂತಾದ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಜನರಿಗೆ ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಗ್ರಾ.ಪಂ.ನ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸುವಂತೆ ಮತ್ತು ನೀರಿನ ಕಂದಾಯವನ್ನು ಸಕಾಲದಲ್ಲಿ ಪಾವತಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ದಾಕ್ಷಾಯಿಣಿ ಕಾಂತರಾಜ್, ಸದಸ್ಯರಾದ ದಿನೇಶ್‌ಕುಮಾರ್, ಮೋಕ್ಷಿತ್ ರಾಜ್, ಪಾವನ, ಲೀನಾ, ರೇಣುಕಾ, ವಿನೋದ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಿರೀಶ್, ನರೇಗಾ ಯೋಜನೆ ಅಭಿಯಂತರ ರಾಜೇಶ್, ವಿವಿಧ ಇಲಾಖೆ ಅಧಿಕಾರಿಗಳು ಗ್ರಾ.ಪಂ. ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.