ಸೋಮವಾರಪೇಟೆ, ಡಿ. ೨೦: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. ೨೪ ರಂದು ಪುತ್ತರಿ ಊರೋರ್ಮೆ ಕಾರ್ಯಕ್ರಮ ಕೊಡವ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಮಂಥರ್ ಗೌಡ ಉಪಸ್ಥಿತರಿರುವರು. ಇದೇ ಸಂದರ್ಭ ಸಮಾಜದ ಮಾಜಿ ಉಪಾಧ್ಯಕ್ಷ ಬಾಚಿನಾಡಂಡ ಕೆ. ಪೂಣಚ್ಚ, ಮಾಜಿ ನಿರ್ದೇಶಕ ಬಾಚಳ್ಳಿರ ಕೆ. ಕರುಂಬಯ್ಯ ಅವರುಗಳನ್ನು ಸನ್ಮಾನಿಸಲಾಗುವುದು.

ಮುಕ್ಕೋಡ್ಲು ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ತಂಡದಿAದ ಬೊಳಕಾಟ್, ಕೋಲಾಟ್ ಮತ್ತು ಕತ್ತಿಯಾಟ್ ಹಾಗೂ ಮೂವತ್ತೊಕ್ಲು ನಾಗಂಡ ತಂಡದಿAದ ಉಮ್ಮತ್ತಾಟ್ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು, ಸ್ತಿçÃಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಟಿಸಿಹೆಚ್. ಡಿಪ್ಲೊಮೋ, ಪದವಿ, ಸ್ನಾತಕೋತ್ತದ ಶಿಕ್ಷಣದಲ್ಲಿ ಶೇ. ೭೦ಕ್ಕಿಂತಲೂ ಹೆಚ್ಚಿನ ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು.