ಮಡಿಕೇರಿ, ಡಿ. ೨೧: ವೀರಾಜಪೇಟೆ ತಾಲೂಕಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಒಟ್ಟು ರೂ. ೩೦ ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಸಂಬAಧ ಆರಂಭಿಕವಾಗಿ ೧೨ ಕೋಟಿ ಅನುದಾನ ಬಿಡುಗಡೆ ಮಾಡಲು ಸಂಪುಟ ಒಪ್ಪಿಗೆÀ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇಲಾಖೆಯ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ತಿಳಿಸಿದ್ದಾರೆ.