ಪದ್ಮಶ್ರೀ ಹಿಂದಿರುಗಿಸಿದ ಬಜರಂಗ್ ಪುನಿಯಾ
ನವದೆಹಲಿ, ಡಿ. ೨೨: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ, ಮತ್ತೊಬ್ಬ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಈ ಸಂಬAಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಬಜರಂಗ್ ಪೂನಿಯಾ ಅವರು, ‘ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ; ಮುಖ್ಯ ಶಿಕ್ಷಕಿ ಅಮಾನತು
ಬೆಂಗಳೂರು, ಡಿ. ೨೨: ಕೋಲಾರದಲ್ಲಿ ಶಾಲಾ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಬೆೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೋದಲ್ಲಿ, ಕೆಲವು ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬAದಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ, ಆವರಣದ ಹೊರಗೆ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಕೂಡಲೇ ಶಾಲೆಗೆ ಆಗಮಿಸಿದ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ಅಂಜನಪ್ಪ ಅವರು, ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗುಜರಾತ್ ಸರ್ಕಾರದಿಂದ ಭಗವದ್ಗೀತೆ ಪೂರಕ ಪಠ್ಯಪುಸ್ತಕ ಬಿಡುಗಡೆ
ಅಹಮದಾಬಾದ್, ಡಿ. ೨೨: ಮುಂದಿನ ಶೈಕ್ಷಣಿಕ ವರ್ಷದಿಂದ ೬ ರಿಂದ ೮ನೇ ತರಗತಿಗಳಿಗೆ ‘ಭಗವದ್ಗೀತೆ' ಕುರಿತು ಪೂರಕ ಪಠ್ಯಪುಸ್ತಕವನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಈ ಕ್ರಮವು ಭಾರತದ ಶ್ರೀಮಂತ, ವೈವಿಧ್ಯಮಯ ಪ್ರಾಚೀನ ಸಂಸ್ಕೃತಿಯ ಕುರಿತು ವಿದ್ಯಾರ್ಥಿಗಳಿಗೆ ಕಲಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯ(ಎನ್ಇಪಿ) ಚೌಕಟ್ಟಿನಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಅವರು ಹೇಳಿದ್ದಾರೆ. ಎನ್ಇಪಿ-೨೦೨೦ರ ಅಡಿಯಲ್ಲಿ ರಾಜ್ಯ ಶಿಕ್ಷಣ ಇಲಾಖೆಯು ‘ಶ್ರೀಮದ್ ಭಗವದ್ಗೀತೆ’ಯಲ್ಲಿನ ಆಧ್ಯಾತ್ಮಿಕ ತತ್ವಗಳು ಮತ್ತು ಮೌಲ್ಯಗಳನ್ನು ೬ ರಿಂದ ೮ನೇ ತರಗತಿಯ ಪಠ್ಯಕ್ರಮದಲ್ಲಿ ಪೂರಕ ಪಠ್ಯಪುಸ್ತಕವಾಗಿ ಸೇರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪನ್ಶೆರಿಯಾ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಧನ್ಯವಾದ ಅರ್ಪಿಸಿದ ಸಚಿವರು, ಈ ಶೈಕ್ಷಣಿಕ ನಿರ್ಧಾರದ ಬಗ್ಗೆ ವಿದ್ಯಾರ್ಥಿಗಳು ಹೆಮ್ಮೆಪಡುತ್ತಾರೆ ಎಂದು ಹೇಳಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಉಪ ಸಮಿತಿ ರಚನೆ
ಬೆÉಂಗಳೂರು, ಡಿ. ೨೨: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಹೆಚ್.ಸಿ. ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ.ಸಿ. ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿಯು ಕೋವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ಔಷಧಿ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ಈ ಸಮಿತಿ ನಿರ್ಧರಿಸಲಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಆರೋಗ್ಯ ಇಲಾಖೆ ಸೇರಿದಂತೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.